ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ನಾಮದೇವ ಸಾಲಮಂಟಪಿ ಉದ್ಘಾಟಿಸಿದರು. ಎನ್.ಎಸ್.ಬಾಗಿ, ಗಿರಿಮಲ್ಲಪ್ಪ ಉಪ್ಪಾರ, ಎಲ್.ಎಸ್.ಕಾಳೆ, ಎನ್.ಎಸ್.ಉಗಾರೆ, ಬಿಇಒ ಮಲ್ಲಪ್ಪ ಮುಂಜೆ ಇತರರಿದ್ದರು.
ಅಥಣಿ ಗ್ರಾಮೀಣ: ಶಾಲೆಗೆ ತೆರಳಿ ಅಕ್ಷರ ಜ್ಞಾನ ಪಡೆಯುವುದು ಪ್ರತಿ ಮಗುವಿನ ಹಕ್ಕು, ಅದನ್ನು ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನಾಮದೇವ ಸಾಲಮಂಟಪಿ ಹೇಳಿದರು.
ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಸುರಕ್ಷತೆ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯವಿವಾಹ ಮಾಡುವುದು ಗಮನಕ್ಕೆ ಬಂದರೆ ತಕ್ಷಣವೇ ಪೊಲೀಸರಿಗೆ ಇಲ್ಲವೇ ೧೦೯೮ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸಬೇಕು. ಪೋಕ್ಸೋ ಪ್ರಕರಣ ಹೆಚ್ಚುತ್ತಿದ್ದು, ವಿದ್ಯಾರ್ಥಿನಿಯರು ಎಚ್ಚರಿಕೆಯಿಂದ ಇರಬೇಕು ಎಂದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬಾಗಿ ಮಾತನಾಡಿ, ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಬೇಕು ಎಂದರು.