ಕಾರ್ಮಿಕರ ಹಿತರಕ್ಷಣೆ ಎಲ್ಲರ ಹೊಣೆ

ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ವಿಶ್ವ ಕಾರ್ಮಿಕ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಗೆ ಸೈಕಲ್ ವಿತರಿಸಲಾಯಿತು. ಮರುಳಸಿದ್ಧ ಸ್ವಾಮೀಜಿ, ಲಕ್ಷ್ಮಣ ಸವದಿ, ಭುವನೇಶ್ವರಿ ಢಾಲೆ, ಭುವನೇಶ್ವರಿ ಯಂಕಚ್ಚಿ, ಸುರೇಶ ನಿಕ್ಕಂ, ಸುರೇಶ ಮೊಪಗಾರ ಇತರರಿದ್ದರು.
ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ವಿಶ್ವ ಕಾರ್ಮಿಕ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಗೆ ಸೈಕಲ್ ವಿತರಿಸಲಾಯಿತು. ಮರುಳಸಿದ್ಧ ಸ್ವಾಮೀಜಿ, ಲಕ್ಷ್ಮಣ ಸವದಿ, ಭುವನೇಶ್ವರಿ ಢಾಲೆ, ಭುವನೇಶ್ವರಿ ಯಂಕಚ್ಚಿ, ಸುರೇಶ ನಿಕ್ಕಂ, ಸುರೇಶ ಮೊಪಗಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಲಕ್ಷ್ಮಣ ಸವದಿ ಅನಿಸಿಕೆ
  • ಕಾರ್ಮಿಕ ದಿನಾಚರಣೆ, ಪ್ರತಿಭಾ ಪುರಸ್ಕಾರ
ಅಥಣಿ: ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದೆ. ಶ್ರಮಿಕ ವರ್ಗದ ಕಲ್ಯಾಣಕ್ಕಾಗಿ ಮತ್ತು ಅವರ ಹಿತರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದ್ದು, ಅದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಶಿವಯೋಗಿ ವೃತ್ತದಲ್ಲಿ ತಾಲೂಕು ಕಾರ್ಮಿಕ ಇಲಾಖೆ ಹಾಗೂ ತಾಲೂಕು ಅಸಂಘಟಿತ ಕಟ್ಟಡ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದ ಬೆನ್ನೆಲುಬಾಗಿರುವ ಕಾರ್ಮಿಕರು ಗೌರವಯುತ ಬದುಕು ನಡೆಸಲು ಪೂರಕ ವಾತಾವರಣ ನಿರ್ಮಿಸುವುದು ನಮ್ಮ ಜವಾಬ್ದಾರಿ. ಕಾರ್ಮಿಕರ ಮಕ್ಕಳಿಗಾಗಿ ೩೬ ಕೋಟಿ ರೂ. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸುತ್ತಿದ್ದೇವೆ. ಅದರಂತೆ ಕಾರ್ಮಿಕ ಸಂಘಟನೆಗೆ ಶಾಸಕರ ನಿಧಿಯಿಂದ ೧೦ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಕಾರ್ಮಿಕರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಂಜೂರು ಮಾಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಗುತ್ತಿಗೆದಾರ ರಾಜು ಆಲಬಾಳ ಸೈಕಲ್ ನೀಡಿ ಪ್ರೋತ್ಸಾಹಿಸಿದರು. ಕಾರ್ಮಿಕ ಇಲಾಖೆ ನಿರೀಕ್ಷಕಿ ಭುವನೇಶ್ವರಿ ಢಾಲೆ ಮಾತನಾಡಿದರು. ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ, ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ರಾಜು ಆಲಬಾಳ, ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ ನಿಕ್ಕಂ, ಉಪಾಧ್ಯಕ್ಷ ಕೇದಾರಿ ಹಳ್ಳದಮಳ, ಚಂದ್ರಶೇಖರ ಐಗಳಿ, ಸುರೇಶ ಮೋಪಗಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net