ಶಾಸಕ ಪಟ್ಟಣ ಬೆಂಬಲಿಗರ ಪ್ರತಿಭಟನೆ

ಶಾಸಕ ಅಶೋಕ ಪಟ್ಟಣಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ರಾಮದುರ್ಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಜಿ.ಬಿ.ರಂಗನಗೌಡ್ರ, ರಮೇಶ ಬಂಡಿವಡ್ಡರ, ಬಸವರಾಜ ಪ್ರಧಾನಿ ಇತರರಿದ್ದರು.
ಶಾಸಕ ಅಶೋಕ ಪಟ್ಟಣಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ರಾಮದುರ್ಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಜಿ.ಬಿ.ರಂಗನಗೌಡ್ರ, ರಮೇಶ ಬಂಡಿವಡ್ಡರ, ಬಸವರಾಜ ಪ್ರಧಾನಿ ಇತರರಿದ್ದರು.
Published on

ರಾಮದುರ್ಗ:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಶಾಸಕ ಅಶೋಕ ಪಟ್ಟಣ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸ್ಥಳೀಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ನಗರದ ಹುತಾತ್ಮ ಸರ್ಕಲ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಹೈಕಮಾಂಡ್ ಶಾಸಕ ಅಶೋಕ ಪಟ್ಟಣ ಹಿರಿತನಕ್ಕೆ ಬೆಲೆ ನೀಡಿಲ್ಲ. ಮೂರು ಬಾರಿ ಶಾಸಕರಾಗಿರುವ ಪಟ್ಟಣ ಅವರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದೆ. ಅವರ ತಂದೆ-ತಾಯಿ ಸ್ವಾತಂತ್ರ್ಯ ಹೋರಾಟಗಾರರು, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷ ನಿಷ್ಠರಾಗಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದು ಖಂಡನೀಯ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ರಮೇಶ ಬಂಡಿವಡ್ಡರ, ಬಸವರಾಜ ಪ್ರಧಾನಿ, ಸಾಗರ ಮುನವಳ್ಳಿ, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.

"

ದೇವರಾಜ ಅರಸು ಕಾಲದಿಂದಲೂ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತಾ ಬಂದಿದೆ. ಹಿರಿತನ ಪರಿಗಣಿಸಿ ಸಚಿವ ಸ್ಥಾನ ನೀಡಬೇಕಿತ್ತು. ಆದರೆ, ಸಂಪುಟದಿಂದ ಕೈ ಬಿಟ್ಟಿರುವುದು ಬೇಸರವಾಗಿದೆ. ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ.

— ಅಶೋಕ ಪಟ್ಟಣ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net