ಮಂಗಳವಾರ ಸಂಜೆ ತನ್ನ ವಾರ್ಡ್ ಬಿಟ್ಟು ಬೇರೊಂದು ವಾರ್ಡ್‌ಗೆ ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಪ್ರಶ್ನಿಸಿದ್ದ ಸ್ಪಾಫ್ ನರ್ಸ್ ಬಸವರಾಜ ಕಬಾಡಗಿ, ಮಹಿಳೆಯ ಕೈ ಹಿಡಿದು ವಾರ್ಡ್‌ಗೆ ಹೋಗುವಂತೆ ಹೇಳಿದ್ದರಂತೆ. ಇದೇ ವಿಷಯಕ್ಕೆ ಆಕೆಯ ಸಂಬಂಧಿಗಳು ಆಸ್ಪತ್ರೆಗೆ ಬಂದು ಹಲ್ಲೆ ಮಾಡಿದ್ದಾರೆ. ಇದರಿಂದ ನಾವು ಭಯದಲ್ಲಿ ಕೆಲಸ ಮಾಡುವಂತಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.