ಅಧಿವೇಶನದಲ್ಲಿ ಚಿಕ್ಕೋಡಿ ಡಿಸ್ಟ್ರಿಕ್ಟ್ ಘೋಷಿಸಲಿ

ಚಿಕ್ಕೋಡಿ ಜಿಲ್ಲೆಯನ್ನಾಗಿ ೋಷಣೆ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಎಸ್.ವೈ.ಹಂಜಿ, ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ ಇತರರಿದ್ದರು.
ಚಿಕ್ಕೋಡಿ ಜಿಲ್ಲೆಯನ್ನಾಗಿ ೋಷಣೆ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಎಸ್.ವೈ.ಹಂಜಿ, ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ ಇತರರಿದ್ದರು.
Published on
ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಶೀಘ್ರ ರೈಲು ತಡೆ ಚಳವಳಿ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ವೈ.ಹಂಜಿ, ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ, ಭರತ ಕಲಾಚಂದ್ರ, ಕೃಷ್ಣ ಕೆಂಚನ್ನವರ, ಸಂಜಯ ಪಾಟೀಲ, ಕುಮಾರ ಗುಡೆ, ರಾಜೇಂದ್ರ ಗಸ್ತಿ, ವೈಶಾಲಿ ಭೋಸಲೆ, ಸುರೇಶ ಇಟಕರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net