ಚಿಕ್ಕೋಡಿ ಉಪ ವಿಭಾಗದಲ್ಲಿನ ಸರ್ಕಾರಿ ಶಾಲಾ ಕೊಠಡಿ ಶಿಥಿಲಗೊಂಡಿದ್ದು, ಪುನರ್ ನಿರ್ಮಾಣ ಮಾಡಬೇಕು. ಕನ್ನಡ ಶಾಲೆಗಳ ಅಭಿವೃದ್ಧಿ ಮಾಡಿ, ಆವರಣದಲ್ಲಿ ಸ್ವಚ್ಚತೆಗೆ ಕ್ರಮವಹಿಸಬೇಕು. ಮಕ್ಕಳಿಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ, ಡಿಡಿಪಿಐ ಸೀತಾರಾಮು ಆರ್.ಎಸ್, ಶಾಲೆಗಳ ಅಭಿವೃದ್ಧಿಗೆ ಬದ್ಧರಾಗಿದ್ದು ಅಗತ್ಯ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.