ಗಡಿಭಾಗದ ಸರ್ಕಾರಿ ಶಾಲೆ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸಂಜು ಬಡಿಗೇರ, ಪ್ರತಾಪ ಪಾಟೀಲ, ಸುನೀಲ ತೇರದಾಳೆ, ಸಂಜು ಕಾಂಬಳೆ, ಅನಿಲ ನಾವಿ, ಖಾನಪ್ಪ ಬಾಡಕರ ಇತರರಿದ್ದರು.
Published on:
Copied
Follow Us
ಚಿಕ್ಕೋಡಿ: ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಎದುರು ಈಚೆಗೆ ಪ್ರತಿಭಟನೆ ನಡೆಸಿ, ಡಿಡಿಪಿಐಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ಉಪ ವಿಭಾಗದಲ್ಲಿನ ಸರ್ಕಾರಿ ಶಾಲಾ ಕೊಠಡಿ ಶಿಥಿಲಗೊಂಡಿದ್ದು, ಪುನರ್ ನಿರ್ಮಾಣ ಮಾಡಬೇಕು.
ಕನ್ನಡ ಶಾಲೆಗಳ ಅಭಿವೃದ್ಧಿ ಮಾಡಿ, ಆವರಣದಲ್ಲಿ ಸ್ವಚ್ಚತೆಗೆ ಕ್ರಮವಹಿಸಬೇಕು. ಮಕ್ಕಳಿಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ, ಡಿಡಿಪಿಐ ಸೀತಾರಾಮು ಆರ್.ಎಸ್, ಶಾಲೆಗಳ ಅಭಿವೃದ್ಧಿಗೆ ಬದ್ಧರಾಗಿದ್ದು ಅಗತ್ಯ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ, ಪ್ರತಾಪ ಪಾಟೀಲ, ಸುನೀಲ ತೇರದಾಳೆ, ಸಂಜು ಕಾಂಬಳೆ, ಅನಿಲ ನಾವಿ, ಖಾನಪ್ಪ ಬಾಡಕರ ಇತರರಿದ್ದರು.