ಸಂತ್ರಸ್ತರಿಗೆ ತ್ವರಿತ ಪರಿಹಾರ

 ಬೈಲಹೊಂಗಲದಲ್ಲಿ ಮಳೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ನೀಡುವಂತೆ ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಗುರು ಮೆಟಗುಡ್ಡ, ಸುಭಾಸ ತುರಮರಿ, ಸಚಿನ ಕಡಿ ಇತರರಿದ್ದರು.
ಬೈಲಹೊಂಗಲದಲ್ಲಿ ಮಳೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ನೀಡುವಂತೆ ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಗುರು ಮೆಟಗುಡ್ಡ, ಸುಭಾಸ ತುರಮರಿ, ಸಚಿನ ಕಡಿ ಇತರರಿದ್ದರು.
Published on
ಬೈಲಹೊಂಗಲ: ಭಾರೀ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಂಗಡಿಗಳಲ್ಲಿ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿವೆ.
ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ನೀಡುವಂತೆ ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ತಹಸೀಲ್ದಾರ್ ಸದಾಶಿವ ಮೆಕ್ಕೋಜಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕೆಎಲ್‌ಇ ನಿರ್ದೇಶಕ ವಿಜಯ ಮೆಟಗುಡ್ಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಸ ತುರಮರಿ ಮಾತನಾಡಿ, ನಗರದಲ್ಲಿ ಕೆರೆಗೆ ಹರಿಯುತ್ತಿದ್ದ ಮಳೆ ನೀರು ವೈಜ್ಞಾನಿಕ ರೀತಿಯ ಚರಂಡಿ ಹಾಗೂ ಕಾಮಗಾರಿಗಳಿಂದ ಇಂತಹ ಸಮಸ್ಯೆಯಾಗುತ್ತಿದೆ. ಈ ಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು, ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದರು.
ತಹಸೀಲ್ದಾರ್ ಮನವಿ ಸ್ವೀಕರಿಸಿ, ಸೂಕ್ತ ಪರಿಹಾರ ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಪ್ರವೀಣ ಶಿಂಗಾರಿ, ಸದಾಶಿವ ಪಾಟೀಲ, ಮಹಾನಿಂಗ ಬಂಡಿವಡ್ಡರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net