ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ತನೋಜ ಬಾಬು ಗಾಡಿವಡ್ಡರ (22)ಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.
ಮದುವೆ ಮಾಡಿಕೊಳ್ಳತ್ತೇನೆಂದು 2025ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ಎಸ್.ಎಸ್.ಸಿಮಾನಿ, ಪಿಎಸ್‌ಐ ಎಸ್.ಎನ್.ಬಸ್ವಾ ತನಿಖೆ ಮಾಡಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1 ಲಕ್ಷ ರೂ. ದಂಡ ಹಾಗೂ ಬಿಎನ್‌ಎಸ್ ಕಾಯ್ದೆ ಅಡಿ 7 ವರ್ಷ ಕಾರಾಗೃಹ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.