ಅತ್ಯಾಚಾರಿಗೆ ಕಾರಾಗೃಹ ಶಿಕ್ಷೆ, ದಂಡ

ಶಿಕ್ಷೆ
ಶಿಕ್ಷೆ
Published on
ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಚನ್ನಮ್ಮನ ಕಿತ್ತೂರು ಪಟ್ಟಣದ ಕಸಾಯಿ ಗಲ್ಲಿಯ ಇಮ್ರಾನ್ ರಿಯಾಜಹಮ್ಮದ್ ಚೌಧರಿ (29)ಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ
2024ರಲ್ಲಿ ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ್ದ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ಶಿವಾನಂದ ಗುಡಗನಟ್ಟಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ತೀರ್ಪು ನೀಡಿದ್ದಾರೆ. ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net