ಬಾವನಸೌಂದತ್ತಿ ಗ್ರಾಮದಲ್ಲಿ ಕೆರೆ ತುಂಬುವ ಯೋಜನೆಯ ಎರಡನೇ ಮೋಟಾರ್ ಪಂಪಸೆಟ್‌ಗೆ ಶಾಸಕ ಡಿ.ಎಂ.ಐಹೊಳೆ ಚಾಲನೆ ನೀಡಿದರು. ಮಹಾದೇವ ಸನಮುರಿ, ಶಿವಾನಂದ ಮಣ್ಣಿಕೇರಿ, ಅನಿಲ ಹಂಜೆ, ಮಹಾವೀರ ಪಾಟೀಲ ಇತರರಿದ್ದರು.
Published on:
Copied
Follow Us
ರಾಯಬಾಗ: ಕ್ಷೇತ್ರದ 19 ಗ್ರಾಮಗಳ 39 ಕೆರೆಗಳನ್ನು ತುಂಬಿಸುವ ಯೋಜನೆಯಡಿ ಈಗಾಗಲೇ ಮೂರು ಮೋಟಾರಗಳಿಗೆ ಚಾಲನೆ ನೀಡಲಾಗಿದ್ದು, ಎಲ್ಲ ಕೆರೆಗಳಿಗೆ ನೀರು ಹರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಪಂಪ್‌ಸೆಟ್‌ಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ಸಚಿವ ಸತೀಶ ಜಾರಕಿಹೊಳಿ ಪ್ರಾಯೋಗಿಕವಾಗಿ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ್ದರು. ಈಗ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಯೋಜನೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಹಂತ
ಹಂತವಾಗಿ ಎಲ್ಲ ಕೆರೆಗಳಿಗೆ ನೀರು ತುಂಬಲಾಗುತ್ತಿದೆ. ಕೆರೆ ಭರ್ತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ರೈತರಿಗೆ ಅನುಕೂಲವಾಗಲಿದೆ. ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮಗಳಿಗೆ ಈ ಯೋಜನೆ ವರದಾನವಾಗಲಿದೆ ಎಂದರು.