ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಜಾಥಾದಲ್ಲಿ ಮಾತನಾಡಿದ ಅವರು, ರಸ್ತೆ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಯುವಕರು ಅತ್ಯಂತ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದು, ನಿಯಮಗಳು ಒಳ್ಳೆಯದಕ್ಕಾಗಿದ್ದು, ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.