ಸಮುದಾಯ ಭವನಕ್ಕೆ 10 ಲಕ್ಷ ರೂ.

ಹುಣಶ್ಯಾಳ ಪಿವೈ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ಎನ್.ರವಿಕುಮಾರ ಇತರರಿದ್ದರು.
ಹುಣಶ್ಯಾಳ ಪಿವೈ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ಎನ್.ರವಿಕುಮಾರ ಇತರರಿದ್ದರು.
Published on
ಮೂಡಲಗಿ: ಹಿಂದುಳಿದ ಗಂಗಾಮತಸ್ಥ ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗೋಕಾಕನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು. ಸರ್ಕಾರದ 10 ಲಕ್ಷ ರೂ. ಜತೆಗೆ ವೈಯಕ್ತಿಕವಾಗಿ 10 ಲಕ್ಷ ರೂ. ಧನ ಸಹಾಯ ಮಾಡುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು.
ಹುಣಶ್ಯಾಳ ಪಿವೈ ಗ್ರಾಮದಲ್ಲಿ ದಿ.ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೊರಿಯಲ್ ಚಾರಿಟಬಲ್ ಟ್ರಸ್ಟ್ ಹಾಗೂ ಕಪರಟ್ಟಿ- ಕಳ್ಳಿಗುದ್ದಿ ಆಶ್ರಮದ ಸಹಯೋಗದಲ್ಲಿ ಜ್ಯೇಷ್ಠ ಮಾಸದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯನವರ ಪ್ರವಚನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಗೋಕಾಕ ನಗರದಲ್ಲಿ ಮೂಡಲಗಿ-ಗೋಕಾಕ ತಾಲೂಕಿನ ಗಂಗಾಮತಸ್ಥರ ಸಮುದಾಯದ ಆಶಯದಂತೆ ಸಮುದಾಯ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ನಿವೇಶನ ಗುರುತಿಸಿದ್ದು, 30 ವರ್ಷದ ಗುತ್ತಿಗೆಗೆ ಅನುಮೋದನೆ ನೀಡಿದ್ದಾರೆ. ಭವನ ನಿರ್ಮಾಣದಿಂದ ಸಮುದಾಯದ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಅಂಬಿಗರ ಚೌಡಯ್ಯ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಹಿಂದುಳಿದವರನ್ನು ಮೇಲೆತ್ತುವ ಕೆಲಸ ಮಾಡುವ ಮೂಲಕ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಾರಕಿಹೊಳಿ ಸಹೋದರರ ಕಾರ್ಯ ಮಾದರಿಯಾಗಿದೆ ಎಂದು ತಿಳಿಸಿದರು.
ಸುಣಧೋಳಿಯ ಶಿವಾನಂದ ಸ್ವಾಮೀಜಿ ಹಾಗೂ ಕಪರಟ್ಟಿ ಮಠದ ಬಸವರಾಜ ಸ್ವಾಮೀಜಿ ಮಾತನಾಡಿ, ನಿಜ ಶರಣ ಅಂಬಿಗರ ಚೌಡಯ್ಯನವರ ತತ್ತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಕೋಳಿ-ಬೆಸ್ತ ಸಮುದಾಯದ ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ಬಿಜೆಪಿ ಜಿಲ್ಲಾ (ಗ್ರಾ) ಅಧ್ಯಕ್ಷ ಸುಭಾಸ ಪಾಟೀಲ, ಬೆಮುಲ್ ನಿರ್ದೇಶಕರಾದ ಮಲ್ಲು ಪಾಟೀಲ, ಬಸವರಾಜ ಮಾಳೇದವರ, ಗಂಗಾಮತಸ್ಥ ಸಮುದಾಯದ ತಾಲೂಕಾಧ್ಯಕ್ಷ ಮುದುಕಪ್ಪ ತಳವಾರ,
ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಬಿ.ಬಿ.ಹೊಸಮನಿ, ಕೃಷ್ಣ ನಾಶಿ, ತಿಮ್ಮಣ್ಣ ದಡ್ಡಗೋಳ, ಲಕ್ಷ್ಮಣ ದಡ್ಡಗೋಳ, ಬಿಇಒ ಪ್ರಕಾಶ ಹಿರೇಮಠ, ನಾಗಪ್ಪ ಅಂಬಿ, ಲಕ್ಷ್ಮಣ ಯಮಕನಮರಡಿ, ಆನಂದ ಹಿರೇಹೊಳಿ, ಕಾಶಪ್ಪ ಕೋಳಿ, ಪುಂಡಲೀಕ ಸುಂಕದ, ಬಸು ಮೋತ್ಯಾಗೋಳ, ಅಶೋಕ ದಡ್ಡಗೋಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net