ಅಥಣಿ ಗ್ರಾಮೀಣ: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಅಥಣಿ ತಾಲೂಕಿನ ಹುಲಗಬಾಳ, ಬಡಚಿ ಹಾಗೂ ಮುರಗುಂಡಿ ಗ್ರಾಮಗಳ ಎಸ್ಸಿ ಹಾಗೂ ಎಸ್ಟಿ ಬಡಾವಣೆಯಲ್ಲಿ 75 ಲಕ್ಷ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಸಂಸದರ ನಿಧಿಯಿಂದ 70 ಲಕ್ಷ ರೂ. ಮಂಜೂರಾಗಿದೆ ಎಂದು ತಿಳಿಸಿದರು.