ಸಂಗೊಳ್ಳಿ ರಾಯಣ್ಣ ಉತ್ಸವ ನಾಳೆಯಿಂದ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬೆಳಗಾವಿ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜ.12 ಹಾಗೂ 13 ರಂದು ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯ ಸರ್ಕಾರಿ ಪ್ರೌಢ ಶಾಲೆ ಮೈದಾನದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೋಮವಾರ(ಜ.12) ಬೆಳಗ್ಗೆ 10ಕ್ಕೆ ಶಾಸಕ ಮಹಾಂತೇಶ ಕೌಜಲಗಿ ಕಿತ್ತೂರು ಸಂಸ್ಥಾನ ಮಠದ ಧ್ವಜಾರೋಹಣ ನೇರವೆರಿಸಿ,ರಾಯಣ್ಣ ಜ್ಯೋತಿ ಬರಮಾಡಿಕೊಳ್ಳುವರು. ಬೆಳಿಗ್ಗೆ 10.15 ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ಬಾಬಾಸಾಹೇಬ ಪಾಟೀಲ ಜಾನಪದ ಕಲಾವಾಹಿನಿಗಳಿಗೆ ಚಾಲನೆ ನೀಡುವರು. ರಾತ್ರಿ 8ಕ್ಕೆ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವ ಉದ್ಘಾಟಿಸುವರು. ಸ್ಥಳೀಯ ಗುರುಸಿದ್ಧೇಶ್ವರ ಸಂಸ್ಥಾನ ಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಕಿತ್ತೂರು ರಾಜಗುರು ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ ತಂಗಡಗಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು. ರಾತ್ರಿ 9 ಗಂಟೆಗೆ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದಲ್ಲಿ ವೀರರ ಸ್ಮರಣೆಗಾಗಿ ದೀಪೋತ್ಸವ ಜರುಗಲಿದೆ.
ಜ. 23ರಂದು ಬೆಳಗ್ಗೆ 11ಕ್ಕೆ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸ್ಮಾರಕ ಭವನದಲ್ಲಿ ವಿಚಾರ ಸಂಕಿರಣ, ಮಧ್ಯಾಹ್ನ 3ಕ್ಕೆ ಗ್ರಾಪಂ ಆವರಣದಲ್ಲಿ ರಾಷ್ಟ್ರ ಮಟ್ಟದ ಕುಸ್ತಿ ಹಾಗೂ ಸಂಗ್ರಾಮಿ ಕಲ್ಲು ಎತ್ತುವ ಪಂದ್ಯಾವಳಿಗಳು ಜರುಗಲಿವೆ. ಎರಡು ದಿನ ಸಂಜೆ 6ಕ್ಕೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net