ಶಶಿಕಲಾ ಜೊಲ್ಲೆ ವಿದ್ಯಾರ್ಥಿವೇತನ ಪುರಸ್ಕಾರ

ಯಕ್ಸಂಬಾದಲ್ಲಿ ಶಶಿಕಲಾ ಜೊಲ್ಲೆ  ವಿದ್ಯಾರ್ಥಿವೇತನ ಕರಪತ್ರವನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಂಸ್ಥೆ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ, ದೀಪಕ ಪಾಟೀಲ, ಶಿವಾನಂದ ಪಾಟೀಲ, ವಿಜಯ ರಾವುತ, ಎಂ.ಎಂ.ಪಾಟೀಲ ಇತರರಿದ್ದರು.
ಯಕ್ಸಂಬಾದಲ್ಲಿ ಶಶಿಕಲಾ ಜೊಲ್ಲೆ ವಿದ್ಯಾರ್ಥಿವೇತನ ಕರಪತ್ರವನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಂಸ್ಥೆ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ, ದೀಪಕ ಪಾಟೀಲ, ಶಿವಾನಂದ ಪಾಟೀಲ, ವಿಜಯ ರಾವುತ, ಎಂ.ಎಂ.ಪಾಟೀಲ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಘೋಷಣೆ
  • ಗಣ್ಯರಿಂದ ಕರಪತ್ರ ಬಿಡುಗಡೆ
ಚಿಕ್ಕೋಡಿ: ಜೊಲ್ಲೆ ಶಿಕ್ಷಣ ಸಂಸ್ಥೆಯಡಿ ನಿಪ್ಪಾಣಿಯ ಅಣ್ಣಾಸಾಹೇಬ ಜೊಲ್ಲೆ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ೧ ಕೋಟಿ ರೂ. ಮೊತ್ತದ `ಶಶಿಕಲಾ ಜೊಲ್ಲೆ ವಿದ್ಯಾರ್ಥಿವೇತನ ಪುರಸ್ಕಾರ-೨೦೨೬' ಘೋಷಿಸಲಾಗಿದೆ ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.
ಯಕ್ಸಂಬಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ವೇತನದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜೊಲ್ಲೆ ಶಿಕ್ಷಣ ಸಂಸ್ಥೆಯ ಕನಸಿನ ಅಣ್ಣಾಸಾಹೇಬ ಜೊಲ್ಲೆ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ೧ ಕೋಟಿ ರೂ. ಮೊತ್ತದ ವಿದ್ಯಾರ್ಥಿವೇತನ ಪುರಸ್ಕಾರ ಘೋಷಿಸಲಾಗಿದ್ದು, ಈ ಕುರಿತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಪಿಯುಸಿ ಹಂತದಲ್ಲೇ ಗುಣಮಟ್ಟದ ಶಿಕ್ಷಣ ನೀಡಿ ರಾಷ್ಟçಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಲಾಗುವುದು ಎಂದರು.
ಅಣ್ಣಾಸಾಹೇಬ ಜೊಲ್ಲೆ ಸ್ವತಂತ್ರ ಪಿಯು ವಿಜ್ಞಾನ ವಸತಿ ಮಹಾವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿಗೆ ಪ್ರಥಮ ಪಿಯುಸಿಯಲ್ಲಿ ಪ್ರವೇಶ ಪಡೆಯಲು ೪೦೦ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಜಿಲ್ಲೆಯ ೮ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಜ.೪ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಜೊಲ್ಲೆ ಶಿಕ್ಷಣ ಸಂಸ್ಥೆ ಆವರಣ, ಮಧ್ಯಾಹ್ನ ೧೨ ಗಂಟೆಗೆ ನಣದಿಯ ಜೊಲ್ಲೆ ಶಿಕ್ಷಣ ಸಂಸ್ಥೆ ಆವರಣದಲ್ಲಿ ಏರ್ಪಡಿಸಲಾಗಿದೆ.
ಇನ್ನುಳಿದ ಪರೀಕ್ಷಾ ಕೇಂದ್ರಗಳ ಮಾಹಿತಿ, ದಿನಾಂಕ, ಸಮಯವನ್ನು ಕಾಲೇಜಿನ ಜಾಲತಾಣದಲ್ಲಿ (ವೆಬ್‌ಸೈಟ್) ಪ್ರಕಟಿಸಲಾಗುವುದು ಎಂದರು.
ಹೆಚ್ಚು ಅಂಕಗಳಿಸಿದ ಮೊದಲ ೧೦ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಪ್ರವೇಶವಿದೆ. ಪರೀಕ್ಷೆಯಲ್ಲಿ ೧೧-೨೦ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.೭೫, ೨೧-೩೦ ಸ್ಥಾನ ಪಡೆದವರಿಗೆ ಶೇ.೫೦ ಹಾಗೂ ೩೧-೪೦ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.೨೫ ರಿಯಾಯಿತಿ ಕಲ್ಪಿಸಲಾಗಿದೆ. ಪ್ರತಿ ಹಂತದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ೭ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ, ಇನ್ನುಳಿದ ೩ ಸ್ಥಾನ ಮಹಾರಾಷ್ಟ್ರ ಸೇರಿ ಬೇರೆ ಜಿಲ್ಲೆ ವಿದ್ಯಾರ್ಥಿಗಳಿಗೆ ಮೀಸಲಿರಲಿವೆ ಎಂದು ಹೇಳಿದರು.
ಅಣ್ಣಾಸಾಹೇಬ ಜೊಲ್ಲೆ ಸ್ವತಂತ್ರ ಪಿಯು ವಿಜ್ಞಾನ ವಸತಿ ಮಹಾವಿದ್ಯಾಲಯ ಪ್ರಾಚಾರ್ಯ ದೀಪಕ ಪಾಟೀಲ, ಜೊಲ್ಲೆ ಶಿಕ್ಷಣ ಸಂಸ್ಥೆಯ ನಿರ್ದೇಶಕ ಶಿವಾನಂದ ಪಾಟೀಲ, ಜೊಲ್ಲೆ ಗ್ರೂಪ್ ಸಿಇಒ ವಿಜಯ ರಾವುತ, ಸಂಯೋಜಕ ಎಂ.ಎಂ.ಪಾಟೀಲ, ವಿ.ಆರ್.ಭಿವಸೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net