ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಶಾಲೆಯ ಕೀರ್ತಿ

ಮಮದಾಪುರದಲ್ಲಿ ಹಮ್ಮಿಕೊಂಡಿದ್ದ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ, ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಗಣ್ಯರು ಉದ್ಘಾಟಿಸಿದರು. ಮೌನ ಮಲ್ಲಿಕಾರ್ಜುನ ಶಿವಯೋಗಿಗಳು, ಡಾ.ಸಿದ್ದಲಿಂಗ ದೇವರು, ಅಮರನಾಥ ಜಾರಕಿಹೊಳಿ ಇತರರಿದ್ದರು.
ಮಮದಾಪುರದಲ್ಲಿ ಹಮ್ಮಿಕೊಂಡಿದ್ದ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ, ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಗಣ್ಯರು ಉದ್ಘಾಟಿಸಿದರು. ಮೌನ ಮಲ್ಲಿಕಾರ್ಜುನ ಶಿವಯೋಗಿಗಳು, ಡಾ.ಸಿದ್ದಲಿಂಗ ದೇವರು, ಅಮರನಾಥ ಜಾರಕಿಹೊಳಿ ಇತರರಿದ್ದರು.
Published on
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಗರ ಪ್ರದೇಶದ ಮಕ್ಕಳಿಗೆ ಸರಿಸಮನಾಗಿ ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡಿಯಲೆಂಬ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಮೂಲ ಸೌಕರ್ಯ ಹೊಂದಿವೆ. ತಾಲೂಕಿಗೆ ಒಂದು ಕೆಪಿಎಸ್ ಶಾಲೆ ಮತ್ತು ನಾಲ್ಕು ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲಾಗಿ ಎಂದರು.
ತಾಪಂ ಇಒ ಪರಶುರಾಮ ಘಸ್ತೆ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಸರ್ಕಾರ ಕಳೆದ ಹತ್ತು ವರ್ಷಗಳಿಂದ ವಿನೂತನ ಕಾರ್ಯಕ್ರಮ ರೂಪಿಸಿ ಯಶಸ್ವಿಗೊಳಿಸುತ್ತಿದೆ ಎಂದರು.
ಉನ್ನತೀಕರಿಸಿದ ಪ್ರೌಢಶಾಲೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ವಿದ್ಯಾರ್ಥಿನಿಯರ ಯಕ್ಷಗಾನ ಗಮನ ಸೆಳೆಯಿತು. ಮಕ್ಕಳು ಸಮೂಹ ನೃತ್ಯ, ದೇಶಭಕ್ತಿ ಗೀತೆ, ಜಾನಪದ, ಕಂಠಪಾಠ ಹಾಗೂ ರಸಪ್ರಶ್ನೆ ಸೇರಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net