ದ್ವಿತೀಯ ಪಿಯು ಪರೀಕ್ಷೆ ಸುಸೂತ್ರ

ದಿತೀಯ ಪಿಯುಸಿ
ದಿತೀಯ ಪಿಯುಸಿ
Published on
ಬೆಳಗಾವಿ: ದಿತೀಯ ಪಿಯುಸಿ ಪರೀಕ್ಷೆ ಮಂಗಳವಾರ ಮುಕ್ತಾಯಗೊಂಡಿದ್ದು, ಚಿಕ್ಕೋಡಿ ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿವೆ.
ಫೆ.28ರಿಂದ ಮಾ.17ರವರೆಗೆ ಒಟ್ಟು 95 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದ್ದು, ಚಿಕ್ಕೋಡಿಯ 29,543 ಬೆಳಗಾವಿಯ 22,395 ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿದ್ದರು. ಈ ಪೈಕಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕನ್ನಡ ಪ್ರಥಮ ಭಾಷೆ ಪರೀಕ್ಷೆಗೆ 33,174 ಹಾಜರಾಗಿದ್ದು,1027 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಚಿಕ್ಕೋಡಿ ಮತ್ತು ಬೆಳಗಾವಿ ಡಿಡಿಪಿಯು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net