ಭಾನುವಾರದಿಂದ ಶರಣ ಸಂಸ್ಕೃತಿ ಉತ್ಸವ

ಗೋಕಾಕ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶಂಕರ ಗೋರೋಶಿ ಮಾತನಾಡಿದರು. ಬಸವಂತಪ್ಪ ಉಳ್ಳಾಗಡ್ಡಿ, ಸೇವಂತಾ ಮುಚ್ಚಂಡಿ ಇತರರಿದ್ದರು.
ಗೋಕಾಕ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶಂಕರ ಗೋರೋಶಿ ಮಾತನಾಡಿದರು. ಬಸವಂತಪ್ಪ ಉಳ್ಳಾಗಡ್ಡಿ, ಸೇವಂತಾ ಮುಚ್ಚಂಡಿ ಇತರರಿದ್ದರು.
Published on

ಫೆ. 1ರಿಂದ 3ರ ವರೆಗೆ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ 21ನೇ ಶರಣ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷ ಶಂಕರ ಗೋರೋಶಿ ತಿಳಿಸಿದರು.

ಫೆ 1ರಂದು ಬೆಳಗ್ಗೆ 8 ಗಂಟೆಗೆ ನಗರದಲ್ಲಿ ವಿದ್ಯಾರ್ಥಿಗಳಿಂದ ಅರಿವು, ಅಕ್ಷರ ಹಾಗೂ ಆರೋಗ್ಯ ಕಾಲ್ನಡಿಗೆ ಜಾಥಾ ನಡೆಯಲಿದೆ. 8.30ಕ್ಕೆ ಷಟಸ್ಥಲ ಧ್ವಜಾರೋಹಣ ಜರುಗಲಿದೆ. ಜಮಖಂಡಿ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸುವರು. ಶಾಸಕ ರಮೇಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸುವರು. ಸಂಜೆ 6 ಗಂಟೆಗೆ ಯುವಜನೋತ್ಸವ ಮತ್ತು ಸಂಗೀತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

2ರಂದು ಸಂಜೆ 6 ಗಂಟೆಗೆ ಮಹಿಳಾ ಸಮಾವೇಶ ನಡೆಯಲಿದೆ. 
ಸಮಾವೇಶದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುನೀತಾ ಕೃಷ್ಣನ್ ಅವರಿಗೆ ಕಾಯಕಶ್ರೀ ಪ್ರಶಸ್ತಿ ಜತೆಗೆ 1 ಲಕ್ಷ ರೂ. ನಗದು ನೀಡಿ ಗೌರವಿಸಲಾಗುವುದು. ಕೂಡಲಸಂಗಮ ಬಸವ ಧರ್ಮಪೀಠದ ಗಂಗಾಮಾತಾಜಿ, ಬಸವಬೆಳವಿಯ ಶರಣಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ಅಧ್ಯಕ್ಷತೆ ವಹಿಸುವರು ಎಂದರು.
3ರಂದು ಬೆಳಗ್ಗೆ ಶ್ರೀಮಠದ ಕರ್ತೃ ಗದ್ದುಗೆಗೆ ಅಭಿಷೇಕ, ಬಿಲ್ವಾರ್ಚನೆ, ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಪಲ್ಲಕ್ಕಿ ಉತ್ಸವ ಜರುಗಲಿದೆ. ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಗುವುದು ಎಂದು ವಿವರಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಬಸವಂತಪ್ಪ ಉಳ್ಳಾಗಡ್ಡಿ, ಸೇವಂತಾ ಮುಚ್ಚಂಡಿ, ಡಾ.ಸಿ.ಕೆ.ನಾವಲಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net