ಶಿವಾಜಿ ಮಹಾರಾಜರ ಸ್ವಾಭಿಮಾನ ಆತ್ಮವಿಶ್ವಾಸ ಮೂಡಿಸುತ್ತದೆ

ಬೆಳಗಾವಿಯ ಶಿವಾಜಿ ಉದ್ಯಾನದಲ್ಲಿ ಗುರುವಾರ ಶಿವಾಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪೂಜೆ ಸಲ್ಲಿಸಿದರು.
ಬೆಳಗಾವಿಯ ಶಿವಾಜಿ ಉದ್ಯಾನದಲ್ಲಿ ಗುರುವಾರ ಶಿವಾಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪೂಜೆ ಸಲ್ಲಿಸಿದರು.
Published on
ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶಿಸ್ತು ಮತ್ತು ದೇಶಪ್ರೇಮದ ಪ್ರತೀಕ. ಅವರ ಜೀವನ ನಮ್ಮಲ್ಲಿ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಹಿರಿಯ ಸಾಹಿತಿ ಸಿ.ಕೆ.ಜೋರಾಪುರ ತಿಳಿಸಿದರು .
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಾಜಿ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲೇ ಸ್ವರಾಜ್ಯದ ಮಹಾನ ಕನಸು ಕಂಡ ಶಿವಾಜಿ ತಮ್ಮ ಬುದ್ಧಿವಂತಿಕೆ ಮತ್ತು ಧೈರ್ಯದಿಂದ ಅನೇಕ ಕೋಟೆಗಳನ್ನು ಜಯಿಸಿ, ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದರು. ನ್ಯಾಯಪ್ರಿಯ ಆಡಳಿತಗಾರರಾಗಿ ಮಹಿಳೆಯರ ಗೌರವ ಕಾಪಾಡಿದವರು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ರವಿ ನೃತ್ಯ ತಂಡದ ನಿರ್ದೇಶಕ ರವೀಂದ್ರ ಶರ್ಮಾ ಇತರರಿದ್ದರು.
ಇದಕ್ಕೂ ಮುಂಚೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು. ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಪಾಲಿಕೆ ಆಯುಕ್ತ ಎಂ.ಕಾರ್ತಿಕ ಇತರರಿದ್ದರು.
----
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net