ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಡಿ.10ನ್ನು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮೊದಲ ಆಚರಣೆ ಡಿ.10ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದೇವೆ. ನಗರದ ಗಾಂಧಿಭವನದಿಂದ ಬಾಯಿ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಮೆರವಣಿಗೆ ಆರಂಭಿಸುತ್ತೇವೆ. ಜಿಲ್ಲಾಧಿಕಾರಿ ಅನುಮತಿ ಕೊಡುವ ಸ್ಥಳದವರೆಗೆ ತೆರಳಿ, ಅಲ್ಲಿ ಒಂದು ದಿನದ ಮೌನ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.