ವಿವಿಧೆಡೆ ಅಪಘಾತದಲ್ಲಿ ಆರು ಸಾವು

ಅಪಘಾತದಲ್ಲಿ ಆರು ಸಾವು
ಅಪಘಾತದಲ್ಲಿ ಆರು ಸಾವು
Published on
ಬೆಳಗಾವಿ: ಜಿಲ್ಲೆಯ ಗೋಕಾಕ, ಸದಲಗಾ ಮತ್ತು ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾಮದುರ್ಗ ನಗರದಿಂದ ಎಂ.ತಿಮ್ಮಾಪುರ ಗ್ರಾಮಕ್ಕೆ ಬೈಕ್ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ಮುದಕವಿ ಗ್ರಾಮದ ಬಳಿ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರ ಗ್ರಾಮದ ಮರಿಯಪ್ಪ ಮಾದರ (48) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಬಳಿ ರಸ್ತೆ ಬದಿ ನಿಂತಿದ್ದ ನೀರಿನ ಟ್ಯಾಂಕರ್‌ಗೆ ಬೈಕ್ ಡಿಕ್ಕಿಯಾಗಿ ಕಿತ್ತೂರು ತಾಲೂಕು ಎಂ.ಕೆ.ಹುಬ್ಬಳ್ಳಿ ಗ್ರಾಮದ ಪ್ರಕಾಶ ಬಡಿಗೇರ (51) ಮೃತಪಟ್ಟಿದ್ದಾರೆ. ಅವರು ಬೆಣಚಿನಮರಡಿ ಗ್ರಾಮಕ್ಕೆ ತೆರಳುತ್ತಿದ್ದರು.
ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯ ಕಸನಾಳ-ಬೋರಗಾಂವ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಹಾರಾಷ್ಟ್ರದ ಶಿರೋಳ ತಾಲೂಕಿನ ಧತವಾಡ ಜೈನಮಂದಿರ ಗ್ರಾಮದ ಬಾಳಾಸೋ ಮುದಾಳೆ (30) ಮೃತಪಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net