ಕಾಗವಾಡ: ಬೆಳಗಾವಿ ನಗರದ ಮಹಾವೀರ ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಹಯೋಗದಲ್ಲಿ ಕೌಶಲಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು.
ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿ, ವಿದ್ಯಾರ್ಥಿಗಳು ಕೌಶಲಾಭಿವೃದ್ಧಿ, ಉದ್ಯೋಗ ಅವಕಾಶಗಳ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಹೇಳಿದರು. ದೇಶಪಾಂಡೆ ಫೌಂಡೇಶನ್ ಸದಸ್ಯ ರೆಹಮಾನ್ ಅಮ್ಮಣಗಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಕಾರ್ಯಕಾರಿ ಮಂಡಳಿ ಸದಸ್ಯರಾದ ಎ.ಬಿ.ಪಾಟೀಲ, ಮಹಾವೀರ ಹರದಿ, ಉಪ ಪ್ರಾಂಶುಪಾಲ ಡಾ.ಭರತ ಅಲಸಂದಿ, ಪ್ರೊ.ನಿರ್ಮಲಾ ಗಡಾದ, ಪೂನಮ್ ಪಾಟೀಲ, ನಾಗವೇಣಿ ಧರೆಣ್ಣವರ ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.