ಬೆಳಗಾವಿ ಬಿಜೆಪಿ ನಾಯಕರ ಒಗ್ಗಟ್ಟು ಪ್ರದರ್ಶನ

ಬೆಳಗಾವಿ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ  ಬಿ.ಎಲ್.ಸಂತೋಷ ನೇತೃತ್ವದಲ್ಲಿ ಸಂಘಟನಾತ್ಮಕ ಸಭೆ ಜರುಗಿತು. ಬಿ.ವೈ. ವಿಜಯೇಂದ್ರ, ಡಾ.ಪ್ರಭಾಕರ ಕೋರೆ, ಈರಣ್ಣ ಕಡಾಡಿ, ಶಶಿಕಾ ಜೋಲ್ಲೆ, ಅಣ್ಣಾಸಾಹೇಬ ಜೋಲ್ಲೆ, ನಿಖಿಲ್ ಕತ್ತಿ, ಅಭಯ ಪಾಟೀಲ ಇತರರಿದ್ದರು,
ಬೆಳಗಾವಿ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಬಿ.ಎಲ್.ಸಂತೋಷ ನೇತೃತ್ವದಲ್ಲಿ ಸಂಘಟನಾತ್ಮಕ ಸಭೆ ಜರುಗಿತು. ಬಿ.ವೈ. ವಿಜಯೇಂದ್ರ, ಡಾ.ಪ್ರಭಾಕರ ಕೋರೆ, ಈರಣ್ಣ ಕಡಾಡಿ, ಶಶಿಕಾ ಜೋಲ್ಲೆ, ಅಣ್ಣಾಸಾಹೇಬ ಜೋಲ್ಲೆ, ನಿಖಿಲ್ ಕತ್ತಿ, ಅಭಯ ಪಾಟೀಲ ಇತರರಿದ್ದರು,
Published on
-ನಗರದಲ್ಲಿ ಜರುಗಿದ ಸಂಘಟನಾತ್ಮಕ ಸಭೆಯಲ್ಲಿ ಭಾಗಿ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ನೇತೃತ್ವದಲ್ಲಿ ಜರುಗಿದ ಸಂಘಟನಾತ್ಮಕ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಲದೆ, ಪಕ್ಷ ಸಂಘಟನೆ, ರಾಜ್ಯ, ರಾಷ್ಟ್ರೀಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಬೆಳಗಾವಿ ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ ಪಕ್ಷದ ಸ್ಥಳೀಯ ನಾಯಕರು, ಮುಖಂಡರು ಸಭೆ ನಡೆಸಿ ಹೋಗಿದ್ದರು. ತದನಂತರ ಮಂಗಳವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಳಗಾವಿ ಆಗಮಿಸಿದ್ದ ಅವರು ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದರು.
ಭವಿಷ್ಯದ ದಿನಗಳಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ವಲಯದಲ್ಲಿ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತವೆ. ನೆರೆಯ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ತಳಮಟ್ಟದಿಂದಲೇ ಪಕ್ಷ ಸಂಘಟನೆ ಬಲಿಷ್ಠಗೊಳ್ಳುವುದು ಅವಶ್ಯಕವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗಾಗಿಯೇ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತೇನೆ ಎಂದು ಬಿ.ಎಲ್.ಸಂತೋಷ ಭರವಸೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯಸಭೆಯ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೋಲ್ಲೆ, ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ್, ಮಹೇಶ ಟೆಂಗಿನಕಾಯಿ, ಶಶಿಕಲಾ ಜೋಲ್ಲೆ, ನಿಖಿಲ್ ಕತ್ತಿ, ದರ್ಯೋಧನ ಐಹೊಳೆ, ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಜಗದೀಶ ಮೆಟಗುಡ್ಡ, ಡಾ.ವಿ.ಐ. ಪಾಟೀಲ, ಮಹಾದೇವಪ್ಪ ಯಾದವಾಡ, ವಕ್ತಾರ ಎಂ.ಬಿ.ಝಿರಲಿ, ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ,ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net