ಕೈಗಾರಿಕೆ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆ ಪರಿಹರಿಸಿ

 ಬೆಳಗಾವಿ ನಗರದ ಹೆಸ್ಕಾಂ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ಜಗದೀಶ ಶೆಟ್ಟರ್ ಹೇಳಿದರು. ಪ್ರಭಾಕರ ನಾಗರಮುನ್ನೋಳಿ, ಎನ್.ಇ.ಕ್ರಾಂತ ಇತರರಿದ್ದರು.
ಬೆಳಗಾವಿ ನಗರದ ಹೆಸ್ಕಾಂ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ಜಗದೀಶ ಶೆಟ್ಟರ್ ಹೇಳಿದರು. ಪ್ರಭಾಕರ ನಾಗರಮುನ್ನೋಳಿ, ಎನ್.ಇ.ಕ್ರಾಂತ ಇತರರಿದ್ದರು.
Published on
ಬೆಳಗಾವಿ :ಬೆಳಗಾವಿ ನಗರ, ಗ್ರಾಮೀಣ ಭಾಗದ ಕೈಗಾರಿಕೆ ಪ್ರದೇಶಗಳಲ್ಲಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆ ತಕ್ಷಣ ಪರಹರಿಸಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸಂಸದ ಜಗದೀಶ ಶೆಟ್ಟರ್ ಸೂಚಿಸಿದರು.
ನಗರದ ಹೆಸ್ಕಾಂ ಕಚೇರಿಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಕೆಪಿಟಿಸಿಎಲ್ ಹಾಗೂ ಹೆಸ್ಕಾಂ ನಡುವಿನ ಸಮನ್ವಯ ಕೊರತೆ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷೃದಿಂದಾಗಿ ಕೈಗಾರಿಕೆ ಉದ್ಯಮಿದಾರರು ಸಮಸ್ಯೆ ಎದುರಿಸುತ್ತಿರುವುದು ಮೇಲ್ನೋಟಕ್ಕೆ ಅನುಮಾನ ವ್ಯಕ್ತವಾಗಿದೆ. ನಿಮ್ಮ ತಪ್ಪಿನಿಂದಾಗಿ ಕೈಗಾರಿಕೆಗಳು ಬೇರೆ ರಾಜ್ಯಗಳಿಗೆ ಸ್ಥಳಾಂತರವಾಗುತ್ತಿವೆ ಎಂದು ಆಕ್ರೊಶ ವ್ಯಕ್ತಪಡಿಸಿದರು.
ಕೈಗಾರಿಕೆ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡದಿದ್ದರೆ ಉದ್ಯಮ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿದೆ. ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌ಗಳನ್ನು ವಿಳಂಬವಿಲ್ಲದೆ ತಕ್ಷಣವೇ ಒದಗಿಸಬೇಕು. ಕೈಗಾರಿಕೆಗಳು ಸರ್ಕಾರಕ್ಕೆ ಅಧಿಕ ಪ್ರಮಾಣದಲ್ಲಿ ತೆರಿಗೆ ಕಟ್ಟುತ್ತಿರುವ ಹಿನ್ನೆಲೆ ಅವರಿಗೆಲ್ಲಾ ಸೌಲಭ್ಯ ಕಲ್ಪಿಸುವುದು ಸರ್ಕಾರ ಜವಾಬ್ದಾರಿಯಾಗಿದೆ. ಸ್ಥಳೀಯ ಮಟ್ಟದ ಸಮಸ್ಯೆಗಳಲ್ಲಿ ಅಲ್ಲಿಯೇ ಪರಿಹರಿಸಲು ಪ್ರಯತ್ನಿಸಬೇಕು.ಆಡಳಿತಾತ್ಮಕ ಸಮಸ್ಯೆ ಎದುರಾದ ಸಂದರ್ಭದಲ್ಲಿ ರಾಜ್ಯದ ಮಟ್ಟದ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಇತ್ಯರ್ಥ ಪಡಿಸಬೇಕು. ಉದ್ಯಮಿದಾರರ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ನಾವಗೆ ಹೆಸ್ಕಾಂ ಉಪಕೇಂದ್ರದಿಂದ ಮಾರ್ಗ ಮಧ್ಯದಲ್ಲಿರುವ ಅಪಾಯಕಾರಿ ಅಕೇಶಿಯಾ ಮರಗಳು ಸಣ್ಣ ಗಾಳಿ ಬಂದೂರ ವಿದ್ಯುತ್ ತಂತಿಗಳ ಮೇಲೆ ಬಿದ್ದು ಪದೇ ಪದೇ ಎದುರಾಗುತ್ತಿದೆ. ನೇಕಾರರಿಗೆ ನೀಡುತ್ತಿರುವ ವಿದ್ಯುತ್ ಸೌಲಭ್ಯಗಳನ್ನು ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು. ಈ ಸಂಬಂಧ ಸರ್ಕಾರದೊಂದಿಗೆ ಕೂಡ ಚರ್ಚಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನ್ನೋಳಿ, ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net