ಮಾಂಜರಿ: ರಾಯಬಾಗ ತಾಲೂಕಿನ ಯಡ್ರಾವ ಗ್ರಾಮದಲ್ಲಿರುವ ಕೆಎಲ್‌ಇ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳು ಈಚೆಗೆ ಜರುಗಿದ ಚಿಕ್ಕೋಡಿ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಕುಲ ಕೆಂಚೆ ಚಕ್ರಎಸೆತದಲ್ಲಿ ಪ್ರಥಮ, ಗುಂಡುಎಸೆತದಲ್ಲಿ ದ್ವಿತೀಯ, ಹೇಮಾ ಬೆಳಸೆ ಎತ್ತರ ಜಿಗಿತದಲ್ಲಿ ಪ್ರಥಮ, ಮಲ್ಲಿನಾಥ ಕಲ್ಲಶೆಟ್ಟಿ ಎತ್ತರ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಜ್ಞಾ ಪಡಲಾಳೆ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಸತ್ಯಪ್ಪ ಬಿಷ್ಠೆ, ಮುಖ್ಯ ಶಿಕ್ಷಕ ದಯಾನಂದ ಕಬ್ಬುರೆ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಜಿ.ಕಾಂಬಳೆ, ಎ.ಎಸ್.ಮಗದ್ದುಮ್ ಹರ್ಷ ವ್ಯಕ್ತಪಡಿಸಿದ್ದಾರೆ.