ಯಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರುದ್ಧ ಜಾಗೃತಿ ಅಭಿಯಾನದಲ್ಲಿ ಬಿ.ಕೆ.ಆರತಿ, ನಿರ್ಮಲ ಗುರವ, ಆರ್.ಜಿ.ಕಾಂಬಳೆ, ಭಾಗ್ಯಶ್ರೀ ಇದ್ದರು.
Published on:
Copied
Follow Us
ಮಾಂಜರಿ:
ದುಶ್ಚಟ ಮತ್ತು ಮಾದಕ ವಸ್ತುಗಳಿಂದ ಪ್ರತಿಯೊಬ್ಬರೂ ದೂರವಿದ್ದು ಉತ್ತಮ ಆರೋಗ್ಯ ರೂಢಿಸಿಕೊಳ್ಳಬೇಕು ಎಂದು ಅಂಕಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ.ಕೆ.ಆರತಿ ಹೇಳಿದರು.
ಯಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರುದ್ಧ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಹಾಗೂ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಒಪ್ಪಂದ ಮಾಡಿಕೊಂಡು ದೇಶದ 10 ಕೋಟಿ ಯುವಜನರನ್ನು ನಶಾಪೀಡಿತ ಸ್ಥಿತಿಯಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ. ದುಶ್ಚಟದಿಂದ ಮುಕ್ತಿ ಹೊಂದಿದಾಗ ಮಾತ್ರ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದರು.
ಬ್ರಹ್ಮಕುಮಾರಿ ಭಾಗ್ಯಶ್ರೀ ಮಾತನಾಡಿ, ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಧ್ಯೇಯ-ಉದ್ದೇಶ ಕುರಿತು ಮಾಹಿತಿ ನೀಡಿದರು. ಬಿ.ಕೆ.ಸವಿತಾ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಪ್ರತಿಜ್ಞಾ ವಿಧಿ ಬೋಧಿಸಿದರು. ಮನೋಹರ ತೋರಸೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ಆರ್.ಜೆ.ಕಾಂಬಳೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ನಿರ್ಮಲಾ ಗುರವ ಇತರರಿದ್ದರು.