ಭಾರತ ಜೋಡೋ ಯುವ ಸಂಘ ರಚಿಸಲು ಕ್ರಮ

ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು.  ರವಿ ಬಂಗಾರೆಪ್ಪನವರ,  ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ ಇತರರಿದ್ದರು.
ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ರವಿ ಬಂಗಾರೆಪ್ಪನವರ, ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ ಇತರರಿದ್ದರು.
Published on

ಬೆಳಗಾವಿ :

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಭಾರತ ಜೋಡೋ ಯುವ ಸಂಘಟನೆಗಳ ರಚನೆಗೆ ಕ್ರಮ ವಹಿಸುವಂತೆ ಜಿಪಂ ರಾಹುಲ ಶಿಂಧೆ ಸೂಚಿಸಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ,ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ನಿಯಮಾನುಸಾರ ಯುವ ಸಂಘಗಳನ್ನು ರಚಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ಕೆಲಸ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಜಿಪಂ ತುರ್ತಾಗಿ ಹಲವು ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ, ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕೂಲಿಕಾರರಿಗೆ ಕೆಲಸ ನೀಡಬೇಕು. ಸಕಾಲಕ್ಕೆ ಕೂಲಿ ಪಾವತಿಗೆ ಕ್ರಮವಹಿಸಬೇಕು.
ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾನವ ದಿನಗಳ ಸೃಜನೆಗೆ ಆದ್ಯತೆ ನೀಡಬೇಕು. ಅನುಷ್ಟಾನ ಇಲಾಖೆಗಳಿಂದಲೂ ಕೂಡ ಕಾಮಗಾರಿಗಳನ್ನು ಆರಂಭಿಸಿ, ಕೂಲಿಕಾರರಿಗೆ ಸಕಾಲಕ್ಕೆ ಕೆಲಸ ಒದಗಿಸಬೇಕು. ಕಾಮಗಾರಿಗಳನ್ನು ನಿಯಮಾನುಸಾರ ಮಾಡಬೇಕು. ಎನ್‌ಎಂಎಂಎಸ್ ಹಾಜರಾತಿಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಘನ ಮತ್ತು ದ್ರವ ತ್ಯಾಜ್ಯ ವಿರ್ವಹಣಾ ಘಟಕಗಳು ಹಾಗೂ ವಿಲೇವಾರಿ ವಾಹನಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಕೆಲವು ಗ್ರಾಪಂಗಳಲ್ಲಿ ನಿರ್ಮಿಸಲಾಗಿರುವ ಪ್ಲಾಸ್ಟಿಕ ನಿರ್ವಹಣಾ ಘಟಕಗಳನ್ನು ಕೂಡಲೇ ಕಾರ್ಯಾಚರಣೆಗೊಳಿಸಬೇಕು ಎಂದು ಸೂಚನೆ ನೀಡಿದರು.
ಜೆಜೆಎಂ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮವಹಿಸುವುದು, ನೀರಿನ ಪರೀಕ್ಷೆ ಕೈಗೊಳ್ಳುವುದು, ವಿವಿಧ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ (ಆಡಳಿತ), ಬಸವರಾಜ ಅಡವಿಮಠ (ಅಭಿವೃದ್ಧಿ), ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net