ಪಾಲಿಕೆ ಉಪ ಆಯುಕ್ತ (ಕಂದಾಯ), ನಗರ ಗಣತಿ ಅಧಿಕಾರಿ ಡಾ. ಸಿದ್ದು ಹುಲ್ಲೋಳಿ ಮಾತನಾಡಿ, ನಿಗದಿ ಪಡಿಸಿದ ಅವಧಿ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳಿಸಿದ ಸಿಬ್ಬಂದಿಯ ಕಾರ್ಯ ಶ್ಲಾಘಿನೀಯ. ಶೀಘ್ರವಾಗಿ ಅಂತಹ ಸಿಬ್ಬಂದಿಗೆ ಅಭಿನಂದನಾ ಪತ್ರ ನೀಡಿ ಗೌರವಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು. ಗಣತಿ ಕಾರ್ಯ ಆರಂಭಿಸದಿರುವ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.