

ಬೆಳಗಾವಿ: ಸ್ವಾತಂತ್ರ್ಯ ಹೋರಾಟದಲ್ಲಿ ಹಲವರ ತ್ಯಾಗ ಬಲಿದಾನವಿದೆ. ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಎಮಿನೆಂಟ್ ಕೋಚಿಂಗ್ ಕ್ಲಾಸಿಸ್ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ಕೌಲಗಿ ಅಭಿಪ್ರಾಯಪಟ್ಟರು. ಮಹಾಂತೇಶ ನಗರದಲ್ಲಿರುವ ಎಮಿನೆಂಟ್ ಕೋಚಿಂಗ್ ಕ್ಲಾಸಿಸ್‌ನಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ದೊರಕಿಸಲು ಹಲವು ಮಹಾನ್ ವ್ಯಕ್ತಿಗಳು ಪ್ರಾಣತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯವನ್ನು ಅಭಿವೃದ್ಧಿಗೆ ಬಳಸಿಕೊಂಡು ದೇಶವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಲು ಶ್ರಮಿಸಬೇಕಿದೆ ಎಂದರು. ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಭಾಗ್ಯಲಕ್ಷ್ಮೀ ಕೌಲಗಿ ಮಾತನಾಡಿದರು. ಕವಿತಾ ಬೊಮ್ಮಣ್ಣವರ, ಸಂಜೀವ ದಾವಣಿ, ಸ್ವಾತಿ ಕಟ್ಟಿಮನಿ ಇತರರಿದ್ದರು.