ಸಿಮೆಂಟ್ ಲಾರಿ ಪಲ್ಟಿಯಾಗಿ ವಿದ್ಯಾರ್ಥಿ ಸಾವು

ಸಾವು
ಸಾವು
Published on
ಚಿಕ್ಕೋಡಿ: ರಾಯಬಾಗ ತಾಲೂಕಿನ ಹಾಲಶಿರಗೂರ ಗ್ರಾಮದಲ್ಲಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ ಲಾರಿಯೊಂದು ಶಾಲೆಗೆ ಹೋಗುತ್ತಿದ್ದ ಮೂವರು ಮಕ್ಕಳ ಮೇಲೆ ಪಲ್ಟಿಯಾಗಿದೆ. ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಸುಟ್ಟಟ್ಟಿ ಗ್ರಾಮದ ಅಮಿತ ಚಿದಾನಂದ ಕಾಂಬಳೆ (11) ಮೃತಪಟ್ಟಿದ್ದು, ಅಂಜಲಿ ಲಕ್ಷ್ಮಣ ಕಾಂಬಳೆ (16), ಅವಿನಾಶ ಕಾಂಬಳೆ (16) ತೀವ್ರ ಗಾಯಗೊಂಡಿದ್ದಾರೆ. ಮೂವರು ಮಕ್ಕಳು ರಸ್ತೆ ಬದಿಯಲ್ಲಿ ನಡೆದು ಶಾಲೆಗೆ ತೆರಳುತ್ತಿದ್ದಾಗ ಮಿರಜ ಕಡೆಯಿಂದ ಬಂದ ಲಾರಿ ಪಲ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಲಾರಿ ಕೆಳಗೆ ಸಿಲುಕಿದ್ದ ಮಕ್ಕಳನ್ನು ಹೊರತೆಗೆದಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕುಡಚಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net