ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿ ಬೆಳೆಸಿಕೊಳ್ಳಬೇಕು

ಸಾಧಕರ ದಿನ" ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ನೀಡಿದರು.
ಸಾಧಕರ ದಿನ" ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ನೀಡಿದರು.
Published on
ಬೆಳಗಾವಿ: "ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಸದೃಢ, ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು" ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ದೈಹಿಕ ಶಿಕ್ಷಣ ಮತ್ತು ಕ್ರೀಡಾ ನಿರ್ದೇಶನಾಲಯ ಆಯೋಜಿಸಿದ್ದ "ಕ್ರೀಡಾ ಸಾಧಕರ ದಿನ" ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಮಾತನಾಡಿದ ಅವರು, ಜೀವನದಲ್ಲಿ ಕಾಲೇಜು ದಿನಗಳು ಅತ್ಯಮೂಲ್ಯವಾಗಿದ್ದು, ಈ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು. ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿಟ್ಟುಕೊಳ್ಳಬೇಕು" ಎಂದರು.
"ವಿಟಿಯು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಂದೆ ಸಹ ಇದೇ ರೀತಿ ಆಸಕ್ತಿ ತೋರಿ ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗುವಂತೆ" ಶುಭ ಹಾರೈಸಿದರು.
ಅಖಿಲ ಭಾರತೀಯ ಅಂತರ ವಿಶ್ವವಿದ್ಯಾಲಯ ಪಂದ್ಯಾವಳಿಯಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್, ಸಿಮ್ಮಿಂಗ್, ಕರಾಟೆ, ಕಿಕ್ ಬಾಕ್ಸಿಂಗ್, ಅಕ್ವಾಟಿಕ್ಸ್ ಮತ್ತು ನೆಟ್‌ಬಾಲ್ ಸೇರಿದಂತೆ ಹಲವಾರು ಸ್ಪರ್ಧೆಗಳಲ್ಲಿ ವಿಜೇತರಾದವನ್ನು ಗುರುತಿಸಿ ಅಭಿನಂದಿಸಲಾಯಿತು.
2023-24ನೇ ಸಾಲಿನಲ್ಲಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿದ 10 ಕಾಲೇಜುಗಳಿಗೆ 10 ಲಕ್ಷ ರೂ. ಹಾಗೂ ವಿದ್ಯಾರ್ಥಿಗಳಿಗೆ 8.5 ಲಕ್ಷ ರೂ. ಹಾಗೂ 2024-25ನೇ ಸಾಲಿನಲ್ಲಿ 10 ಕಾಲೇಜುಗಳಿಗೆ 12.5 ಲಕ್ಷ ರೂ. ಮತ್ತು ವಿದ್ಯಾರ್ಥಿಗಳಿಗೆ ಅಂದಾಜು 7 ಲಕ್ಷ ರೂ.ಗಳನ್ನು ಕ್ರೀಡಾ ಪ್ರೋತ್ಸಾಹ ಧನವಾಗಿ ನೀಡಲಾಯಿತು.
ಈ ವೇಳೆ ವಿಟಿಯು ಕುಲಸಚಿವರಾದ ಡಾ.ಪ್ರಸಾದ ಬಿ.ರಾಂಪುರೆ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್, ವಿತ್ತಾಧಿಕಾರಿ ಡಾ.ಪ್ರಶಾಂತ ನಾಯಕ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ವೈ.ಎಚ್.ರಾಜೇಶ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net