ವಿದ್ಯಾರ್ಥಿಗಳು ಅವಕಾಶ ಬಳಸಿಕೊಳ್ಳಲಿ

ಕೊಕಟನೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹೊಸದಿಗಂತ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮಹಾಂತೇಶ ಉಕ್ಕಲಿ, ದಯಾನಂದ ಎನ್.ಎಲ್., ವಿನೋದಕುಮಾರ ಮೇತ್ರಿ, ಡಾ.ವಿದ್ಯಾಶ್ರೀ ಕೋಲಕಾರ ಇತರರಿದ್ದರು.
ಕೊಕಟನೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹೊಸದಿಗಂತ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮಹಾಂತೇಶ ಉಕ್ಕಲಿ, ದಯಾನಂದ ಎನ್.ಎಲ್., ವಿನೋದಕುಮಾರ ಮೇತ್ರಿ, ಡಾ.ವಿದ್ಯಾಶ್ರೀ ಕೋಲಕಾರ ಇತರರಿದ್ದರು.
Published on

ಅಥಣಿ ಗ್ರಾಮೀಣ:

ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಜ್ಞಾನ, ಕೌಶಲ ಹಾಗೂ ಸೃಜನಶೀಲತೆ ಬೆಳೆಸಿಕೊಳ್ಳಬೇಕು ಎಂದು ಉಪನ್ಯಾಸಕ ಮಹಾಂತೇಶ ಉಕ್ಕಲಿ ಹೇಳಿದರು.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಘಟಕದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹೊಸದಿಗಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಹೊಸ ಅವಕಾಶ ಗುರುತಿಸಿಕೊಂಡು ಮುನ್ನಡೆಯಬೇಕು ಎಂದರು.
ಐಕ್ಯೂಎಸಿ ಮುಖ್ಯಸ್ಥ ಪ್ರೊ.ದಯಾನಂದ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳು ನೈತಿಕ ಮೌಲ್ಯ ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ವಾಣಿಜ್ಯಶಾಸ ಮುಖ್ಯಸ್ಥ ಪ್ರೊ.ವಿನೋದಕುಮಾರ ಮೇತ್ರಿ, ಪ್ರೊ.ಡಾ.ವಿದ್ಯಾಶ್ರೀ ಕೋಲಕಾರ, ಡಾ.ಪ್ರಶಾಂತ ಪವಾರ, ದಾನಯ್ಯ ಅಪ್ಪಯ್ಯಸ್ವಾಮಿ, ಶ್ರೀಕಾಂತ ಜಾಧವ, ಪಲ್ಲವಿ, ಅಬ್ದುಲ್‌ಗನಿ ಮುಲ್ಲಾ, ಶೈಲಶ್ರೀ ತುಬಚಿ, ಝಾಕಿರಹುಸೇನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net