ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಶಕ್ತಿ ಯೋಜನೆ ಸೀಯರಿಗೆ ವರದಾನವಾಗಿದೆ. ಆದರೆ, ತೀವ್ರ ಜನದಟ್ಟಣೆ, ನೂಕುನುಗ್ಗಲು ಹಾಗೂ ಬಸ್‌ಗಳ ಕೊರತೆಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ಸಾರ್ವಜನಿಕರಿಗೆ ಶಾಪವಾಗಿ ಪರಣಮಿಸುತ್ತಿದೆ.