ಒಗ್ಗೂಡಿ ಕೆಲಸ ಮಾಡಿದರೆ ಯಶಸ್ಸು

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಹಕಾರ ಸಪ್ತಾಹವನ್ನು ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಬಸಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ಹಾಲಪ್ಪ ಜಗ್ಗಿನವರ ಇತರರಿದ್ದರು.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಹಕಾರ ಸಪ್ತಾಹವನ್ನು ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಬಸಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ಹಾಲಪ್ಪ ಜಗ್ಗಿನವರ ಇತರರಿದ್ದರು.
Published on
ಬೆಳಗಾವಿ: ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರ ತತ್ತ$$$್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್​ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ತಾಲೂಕಿನ ಹಿರೇಬಾಗೇವಾಡಿಯ ಜಾಲಿ ಕರೆಮ್ಮದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಹಾಗೂ ಜಿಲ್ಲಾ ಸಹಕಾರ ಯೂನಿಯನ್​ ನಿಯಮಿತದಿಂದ ಭಾನುವಾರ ಏರ್ಪಡಿಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ರಂಗದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ವೈಯಕ್ತಿಕ ಮನಸ್ತಾಪ ಬದಿಗಿಟ್ಟು ಕೆಲಸ ಮಾಡಿದರೆ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಸಾಧ್ಯ ಎಂದು ಹೇಳಿದರು.
ಬೆಳಗಾವಿ ತಾಲೂಕಿನಿಂದ ರಾಹುಲ್​ ಜಾರಕಿಹೊಳಿ ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಅಯ್ಕೆಯಾಗಿದ್ದಾರೆ. ಅವರೊಂದಿಗೆ ಕೈಜೋಡಿಸಿ ರೈತಪರ ಕೆಲಸ ಮಾಡಲಾಗುವುದು. ರಾಷ್ಟ್ರೀಯ ಬ್ಯಾಂಕ್​ಗಳಲ್ಲಿ ರೈತರು ಸಾಲ ಪಡೆಯಲು ನೂರೊಂದು ನಿಯಮ ಎದುರಿಸಬೇಕು. ಆದರೆ ಸಹಕಾರಿ ಬ್ಯಾಂಕ್​ಗಳಲ್ಲಿ ನಿಯಮಗಳನ್ನು ಸಡಿಲಿಸಿ ಸಾಲ ನೀಡಲಾಗುತ್ತಿದೆ. ನರ್ಸರಿ ಮಾಡಲು, ಹೈನುಗಾರಿಕೆ ಸೇರಿ ಹಲವು ಸ್ವಯಂ ಉದ್ಯೋಗದಲ್ಲಿ ತೊಡಗಿಸಲು ಸಹಕಾರಿ ಬ್ಯಾಂಕ್​ಗಳಲ್ಲಿ ನೆರವು ನೀಡಲಾಗುತ್ತಿದೆ. ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಎಂದು ವಿವರಿಸಿದರು.
ಬಸಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ಹಾಲಪ್ಪ ಜಗ್ಗಿನವರ, ರವೀಂದ್ರ ಮೇಳೇದ, ರು ಪಾಟೀಲ, ಭರಮಪ್ಪ ಶೀಗಿಹಳ್ಳಿ, ರಾಮಣ್ಣ ಗುಳ್ಳಿ, ಮುಶೆಪ್ಪ ಹಟ್ಟಿ, ಮಹಾಂತೇಶ ಅಲಾಬಾದಿ, ಸುರೇಶ ಇಟಗಿ, ಬಸನಗೌಡ ಪಾಟೀಲ, ಸಂತೋಷ ಅಂಗಡಿ, ಚಂದ್ರಪ್ಪ ಶಿಂತ್ರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net