ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ

ಅಥಣಿ ಅನ್ನಪೂರ್ಣಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಡಾ.ಸಚಿನ ಮಿರಜ, ಡಾ.ರವಿ ಪಾಂಗಿ, ಪೂರ್ಣಿಮಾ ಪಾಂಗಿ, ಮೋನಿಕಾ ತಾಂಬಟ, ಜಮೀರ್ ಮುಲ್ಲಾ, ಕಿರಣ ಕೆಂಪಿ, ತುಷಾರ ಪಾಟೀಲ ಇತರರಿದ್ದರು.

Published on
ಅಥಣಿ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸುವ ಮಹತ್ವದ ಹಂತವಾಗಿದ್ದು, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಅಧ್ಯಯನ ಮೂಲಕ ಯಶಸ್ಸು ಸಾಧಿಸಬೇಕು ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಸಚಿನ ಮಿರಜ ಹೇಳಿದರು.
ಅನ್ನಪೂರ್ಣಾ ಸಮೂಹ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ನಿರಂತರ ಅಧ್ಯಯನದ ಮಾಡಿದರೆ ಸಾಧನೆ ಸಾಧ್ಯ ಎಂದರು.
ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಪಾಂಗಿ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ನುರಿತ ಉಪನ್ಯಾಸಕರ ಮಾರ್ಗದರ್ಶನ ಜತೆಗೆ ವಿಜ್ಞಾನ ಮತ್ತು
ವಾಣಿಜ್ಯ ಶಿಕ್ಷಣಕ್ಕೆ ಬೇಕಾಗುವ ಎಲ್ಲ ಸೌಲಭ್ಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಂಸ್ಥೆ ಕಾರ್ಯದರ್ಶಿ ಡಾ.ರವಿ ಪಾಂಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆಗೆ
ಉತ್ತಮ ಸಂಸ್ಕಾರ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ತಿಳಿಸಿದರು. ಆಡಳಿತಾಧಿಕಾರಿ ಮೋನಿಕಾ ತಾಂಬಟ, ಪ್ರಾಚಾರ್ಯರಾದ ಮಹಾಂತೇಶ ಮಿರ್ಜಿ, ಜಮೀರ್ ಮುಲ್ಲಾ, ಕಿರಣ ಕೆಂಪಿ, ತುಷಾರ ಪಾಟೀಲ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net