

ಬೆಳಗಾವಿ :
ವಿದ್ಯಾರ್ಥಿಗಳು ಸ್ಪಷ್ಟ ಗುರಿ, ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಪರಿಶ್ರಮ ಅಳವಡಿಸಿಕೊಂಡಲ್ಲಿ ಯಶಸ್ಸು ಪಡೆಯಲು ಸಾಧ್ಯ. ಸಮಾಜ ಸಾಧಕರನ್ನು ಮಾತ್ರ ಗುರುತಿಸುತ್ತದೆ. ಆದ್ದರಿಂದ ಪಠ್ಯದ ಜತೆಗೆ ಕ್ರೀಡೆ, ಸಂಘ ಹಾಗೂ ಕ್ಲಬ್ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಡಾ.ಸಿದ್ದು ಹುಲ್ಲೊಳ್ಳಿ ಹೇಳಿದರು.