ಸತತ ಪರಿಶ್ರಮದಿಂದ ಯಶಸ್ಸು

ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಿವಶಂಕರ ಹಂಜಿ, ಪ್ರಕಾಶ ಮಹಾಜನ, ಎಸ್.ಜಿ.ಸಲಗರೆ, ಅಶೋಕ ಬುರ್ಲಿ ಇತರರಿದ್ದರು.
ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಿವಶಂಕರ ಹಂಜಿ, ಪ್ರಕಾಶ ಮಹಾಜನ, ಎಸ್.ಜಿ.ಸಲಗರೆ, ಅಶೋಕ ಬುರ್ಲಿ ಇತರರಿದ್ದರು.
Published on
ಅಥಣಿ: ಸತತ ಪರಿಶ್ರಮದೊಂದಿಗೆ ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು ಎಂದು ಸ್ಥಳೀಯ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಕಿತ್ತೂರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಜಿ. ಸಲಗರೆ ಹೇಳಿದರು.
ಪಟ್ಟಣದ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಇದು ವಿದ್ಯಾರ್ಥಿಗಳ ಭವಿಷ್ಯದ ಬೆಳಕಾಗಿದೆ ಎಂದರು.
ವಿದ್ಯಾವರ್ಧಕ ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ ಮಹಾಜನ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದಿನತ್ತ ಗಮನಹರಿಸಬೇಕು ಎಂದು ತಿಳಿಸಿದರು.
ಸಂಸ್ಥೆ ಅಧ್ಯಕ್ಷ ಶಿವಶಂಕರ ಹಂಜಿ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನಶೀಲರಾದರೆ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಸಾಧ್ಯ ಎಂದರು.
ಸಂಸ್ಥೆ ನಿರ್ದೇಶಕ ವಿಜಯಕುಮಾರ ಬುರ್ಲಿ, ಅಶೋಕ ಬುರ್ಲಿ, ಸುನೀಲ ಶಿವಣಗಿ, ಶ್ರೀಶೈಲ ಸಂಕ, ಒ.ಎಸ್.ಸಾವಡಕರ, ಮುಖ್ಯಶಿಕ್ಷಕ ಎಂ.ಎಸ್. ದೇಸಾಯಿ, ಎಂ.ಎಸ್.ಧರಿಗೌಡ, ಪಿ.ಡಿ.ಚನಗೌಡರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net