ಪ್ರತ್ಯೇಕ ಉಕ ರಾಜ್ಯ ಬೇಡಿಕೆಗೆ ಬೆಂಬಲ

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬೆಂಬಲಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿದರು. ಚಂದ್ರಕಾಂತ ಹುಕ್ಕೇರಿ, ರುದ್ರಯ್ಯ ಹಿರೇಮಠ ಇತರರಿದ್ದರು.
ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬೆಂಬಲಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿದರು. ಚಂದ್ರಕಾಂತ ಹುಕ್ಕೇರಿ, ರುದ್ರಯ್ಯ ಹಿರೇಮಠ ಇತರರಿದ್ದರು.
Published on
ಚಿಕ್ಕೋಡಿ: ಮತ್ತೆ ಸುದ್ದಿಯಲ್ಲಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.
ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಸಮಿತಿ ಅಧ್ಯಕ್ಷ ಸಂಜು ಬಡಿಗೇರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಹೋರಾಟ ದಶಕಗಳಿಂದ ನಡೆಯುತ್ತಿದೆ. ಆದರೆ, ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಲು ಸಾಧ್ಯವಾಗಿಲ್ಲ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗುತ್ತದೆ ಎಂದು ಹೇಳಿದರು. ಸಮಿತಿ ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ, ರುದ್ರಯ್ಯ ಹಿರೇಮಠ, ಅಮೂಲ್ ನಾವಿ, ಸಿದ್ರಾಮ ಕರಗಾವೆ, ರಮೇಶ ಡಂಗೇರ, ಜಕ್ಕಪ್ಪ ಬಿಳಗಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net