ಮಮದಾಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಆರ್.ಬಿ. ಬಸಾಪುರ, ಎ.ಪಿ.ಜರಳಿ, ಭಾರತಿ ಮಿರ್ಜಿ, ಮಹಾದೇವಿ ಕಂಬಿ, ಶೋಭಾ ಗಾಣಗಿ ಇತರರಿದ್ದರು.
ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆ ಹಾಗೂ ಚಿಂತಾಮಣಿ ಪಾವಟೆ ಪ್ರೌಢಶಾಲೆಯಲ್ಲಿ ಸೋಮವಾರ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಗೋಕಾಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನೆಯ ಸುತ್ತಮುತ್ತ ಹಾಗೂ ಶಾಲೆಯ ಆವರಣದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ತೀವ್ರ ಜ್ವರ, ಚಳಿ, ತಲೆನೋವು ಮತ್ತು ಸುಸ್ತು ಕಂಡುಬಂದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಆರೋಗ್ಯ ಇಲಾಖೆ ಎ.ಪಿ.ಜರಳಿ, ಡಿ.ಕೆ.ಪತ್ತಾರ, ಅರ್ಜುನ ಕರಾಟೆ, ಆಶಾ ಕಾರ್ಯಕರ್ತೆರಾದ ಭಾರತಿ ಮಿರ್ಜಿ, ಮಹಾದೇವಿ ಕಂಬಿ, ಶೋಭಾ ಗಾಣಗಿ, ರೇಣುಕಾ ಸಿದ್ನಾಳ ಇತರರು ಇದ್ದರು.