ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಮಾತನಾಡಿ, ಜಗತ್ತಿನಲ್ಲಿ ಸುಖ, ಶಾಂತಿ ಮತ್ತು ಸಮಾಧಾನ ನೆಲೆಸಬೇಕು ಎಂಬ ಸಂದೇಶವನ್ನು ಭಾರತ ನೀಡಿದೆ. ಮನೆ, ಮಠ ಮತ್ತು ಮಂದಿರದ ವ್ಯವಸ್ಥೆಗಳು ವ್ಯಕ್ತಿಯ ಸಂಸ್ಕಾರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಾಗದೆ ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಹೇಳಿದರು.