ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರವಾಸಿಗಳ ಅಭಿಪ್ರಾಯಕ್ಕನುಗುಣವಾಗಿ ಉತ್ತಮ ಪರಿಸರಪೂರಿತ ವಾತಾವರಣ ನಿರ್ಮಿಸುವುದೇ ಈ ಅಭಿಯಾನದ ಮೂಲ ಉದ್ದೇಶ. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವ ನಗರ ಪಾಲಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಹುಮಾನ, ಸ್ಟಾರ್ ರ‌್ಯಾಂಕಿಂಗ್ ಕೊಡುವ ಸಂಪ್ರದಾಯವನ್ನು ಸರ್ಕಾರ ಹೊಂದಿದೆ. ಇಂತಹ ಉತ್ತಮ ಉದ್ದೇಶ ಹೊಂದಿರುವ ಅಭಿಯಾನವನ್ನು ಆಯುಕ್ತ ಕಾರ್ತಿಕ ಎಂ. ನಿರ್ದೇಶನದಂತೆ ಆರಂಭಿಸಲಾಗಿದೆ ಎಂದು ವಿವರಿಸಿದ್ದಾರೆ.