ಭಾರತೀಯರಿಗೆ ಸರ್ವಭೌಮಾಧಿಕಾರ ಕಲ್ಪಿಸಿಕೊಟ್ಟ ದಿನ

 ಬೆಳಗಾವಿ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ  ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಚಿವ ಸತೀಶ ಜಾರಕಿಹೊಳಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಆಸೀಫ್ ಸೇಠ್, ಮೊಹಮ್ಮದ ರೋಷನ್, ರಾಹುಲ ಶಿಂಧೆ ಇತರರಿದ್ದರು.
ಬೆಳಗಾವಿ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಚಿವ ಸತೀಶ ಜಾರಕಿಹೊಳಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಆಸೀಫ್ ಸೇಠ್, ಮೊಹಮ್ಮದ ರೋಷನ್, ರಾಹುಲ ಶಿಂಧೆ ಇತರರಿದ್ದರು.
Published on
ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟ್ರವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಈ ಐದೂ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅನು?್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ ಎಂದರು.
ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ 4.24 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, ಇಲ್ಲಿವರೆಗೆ 4.25 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ ಶೇ. 100 ರಷ್ಟು ಹಿಂಗಾರು ಬೆಳೆಗಳ ಬಿತ್ತನೆಯಾಗಿರುತ್ತದೆ. ಬಿತ್ತನೆಗೆ ಬೇಕಾಗುವ ಉತ್ತಮ ಗುಣಮಟ್ಟದ 24 ಸಾವಿರ ಕ್ವಿಂಟಲ್ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ 60 ಸಾವಿರ ರೈತರಿಗೆ ಸಕಾಲದಲ್ಲಿ ಪೂರೈಸಲಾಗಿದೆ. ಹಿಂಗಾರು ಬೆಳೆಗಳ ಬೆಳವಣಿಗೆ ಉತ್ತಮವಾಗಿರುತ್ತದೆ.
ಪ್ರಸಕ್ತ ಸಾಲಿನಲ್ಲಿ 1000 ಹೆಕ್ಟೇರ್ ಕಬ್ಬು ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆಗಳನ್ನು ಜಾರಿಗೊಳಿಸಲಾಗಿದೆ.ಬೆಳೆವಿಮೆ ಯೋಜನೆ ಮತ್ತು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯಡಿ 9295 ರೈತರಿಗೆ ಒಟ್ಟು 96.36 ಕೋಟಿ ರೂ. ವಿಮೆ ಪರಿಹಾರ ವಿತರಿಸಲಾಗಿದೆ.
ಲೋಕೋಪಯೋಗಿ ಇಲಾಖೆಯಿಂದ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗಳ ಸುಧಾರಣೆ ಅಡಿಯಲ್ಲಿ 2024-25ನೇ ಸಾಲಿನಲ್ಲಿ, ಒಟ್ಟು 80.74 ಕಿ.ಮೀ. ಉದ್ದದ ರಸ್ತೆ 162.14 ಕೋಟಿ ರೂ. ಅನುದಾನದಲ್ಲಿ 49 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.ಇಲ್ಲಿಯವರೆಗೆ 33.928 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಸಲಾಗಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ 100 ಕೋಟಿ ರೂ.ಮಂಜೂರಾಗಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಬೆಳಗಾವಿ ಜಿಲ್ಲಾಧಿಕಾರಿಗಳ ಕಟ್ಟಡ ನಿರ್ಮಾಣಕ್ಕೆ 75.00 ಕೋಟಿ ರೂ.ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಹತ್ತಿರ 35 ಕೋಟಿ ರೂ.ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ, ಪತ್ರಿಕಾ ಭವನ ನಿರ್ಮಾಣಕ್ಕೆ 9.90 ಕೋಟಿ ರೂ., 58 ವಾರ್ಡ್‌ಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ 27 ಕೋಟಿ ರೂ. ವೆಚ್ಚದ ಕಾಮಗಾರಿ ಟೆಂಡರ್ ಕರೆಯಲಾಗಿದೆ. ಅಮೃತ ಯೋಜನೆಯಲ್ಲಿ 7 ಕೆರೆಗಳ ಪುನಶ್ಚೇತನ ಹಾಗೂ 7 ಉದ್ಯಾನವನಗಳ ಸುಧಾರಣೆಗೆ ಒತ್ತು ನೀಡಲಾಗಿದೆ.ಈ ಪೈಕಿ ಕೋಟೆಕೆರೆ ಅಭಿವೃದ್ಧಿ ಹಾಗೂ ಪುನಶ್ಚೇತನ ಮಾಡುವ ಸಲುವಾಗಿ ರೂ. 9.20 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿ ಪ್ರಗತಿಹಂತದಲ್ಲಿದೆ ಎಂದು ಹೇಳಿದರು.
ಶಾಸಕ ಆಸೀಫ್ ಸೇಠ್, ಮೇಯರ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಡಿಸಿ ಮೊಹಮ್ಮದ ರೋಷನ್, ಸಿಇಒ ರಾಹುಲ್ ಶಿಂಧೆ, ಎಸ್‌ಪಿ ಕೆ.ರಾಮರಾಜನ್ ಇತರರಿದ್ದರು.
.......
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net