ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಮಾಧ್ಯಮ

ಅಂಕಲಿ ಕೆಎಲ್‌ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸದಾಶಿವ ಹಾದಿಮನಿ ಅವರನ್ನು ಸನ್ಮಾನಿಸಲಾಯಿತು. ಎ.ಕೆ.ಪಾಟೀಲ, ಪಿ.ಎ.ಕಾಟೆ, ಪಿ.ಎನ್.ತಳವಾರ ಇದ್ದರು.
ಅಂಕಲಿ ಕೆಎಲ್‌ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸದಾಶಿವ ಹಾದಿಮನಿ ಅವರನ್ನು ಸನ್ಮಾನಿಸಲಾಯಿತು. ಎ.ಕೆ.ಪಾಟೀಲ, ಪಿ.ಎ.ಕಾಟೆ, ಪಿ.ಎನ್.ತಳವಾರ ಇದ್ದರು.
Published on
ಮಾಂಜರಿ: ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮ, ಸಮಾಜದಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಜನರಿಗೆ ಮಾಹಿತಿ ಒದಗಿಸುವ ಜತೆಗೆ ಸರ್ಕಾರ ಸರಿ ದಾರಿಯಲ್ಲಿ ನಡೆಯುವಂತೆ ಮಾಡುತ್ತದೆ ಎಂದು ಉಪನ್ಯಾಸಕ ಸದಾಶಿವ ಹಾದಿಮನಿ ಹೇಳಿದರು.
ಸಮೀಪದ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಸಮಾಜ ಉಳಿಸಿಕೊಳ್ಳಲು ಸಹಾಯಕಾರಿಯಾಗಿದೆ ಎಂದರು. ಪ್ರಾಚಾರ್ಯ ಪ್ರೊ.ಎಂ.ಎಸ್.ಕಾನಡೆ, ಪ್ರೊ.ಪಿ.ಎ.ಕಾಟೆ, ಪ್ರೊ.ಎ.ಕೆ.ಪಾಟೀಲ, ನಾಗರಾಜ ಹೊಂಡಪ್ಪನವರ, ಸುಹಾನ್ ಜಮಾದಾರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net