ಚಿಕ್ಕೋಡಿ ಜಿಲ್ಲೆ‌‌ ಮಾಡಲು ಸರ್ಕಾರ ಬದ್ಧ

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
Published on
ಬೆಳಗಾವಿ:ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ‌ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ನಡೆದ ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆ ಮಾಡಲು‌ ಸರ್ಕಾರ ಬದ್ಧವಾಗಿದೆ ಎಂದರು.
ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ಹಾಗೂ ಶಾಸಕ ಗಣೇಶ್ ಹುಕ್ಕೇರಿ ಅವರು ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ ಎಲ್ಲಾ ಬೇಡಿಕೆ ಈಡೇರಿಸಲು ನಾನು ಬದ್ಧನಾಗಿದ್ದೇನೆ.ಈ ಭಾಗ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ರೈತರನ್ನು ಕಾಪಾಡುವ ಕೆಲಸ ಮಾಡಲಾಗುವುದು. ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ" ಎಂದು ಮನವಿ ಮಾಡಿದರು.
ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ನಿರೀಕ್ಷೆ ಇದೆ ಎಂದು ಹೇಳಿದಾಗ, "ಉತ್ತರ ಕರ್ನಾಟಕ ವಿಚಾರದಲ್ಲಿ ನಾವು ಈಗಾಗಲೇ ಮಾಡಿರುವ ತೀರ್ಮಾನ, ಐತಿಹಾಸಿಕವಾದದ್ದು. ಕೃಷ್ಣ ಮೇಲ್ದಂಡೆ ಯೋಜನೆ ಮುಳುಗಡೆ ಪ್ರದೇಶದ ಜನರಿಗೆ ಪರಿಹಾರವಾಗಿ 70 ಸಾವಿರ ಕೋಟಿ ನೀಡಲು ತೀರ್ಮಾನಿಸಿದ್ದೇವೆ" ಎಂದರು.
"ಈ ಯೋಜನೆಗೆ ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದವರು ಅಡ್ಡಿಪಡಿಸುತ್ತಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸಭೆ ಮಾಡುತ್ತೇನೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net