ಹೌದು. ರಾಜ್ಯದ ಗಡಿಭಾಗ ಬೆಳಗಾವಿ ಜಿಲ್ಲೆಯಲ್ಲಿ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಗೆ ಸಂಬಂಧಿಸಿದ ದೂರುಗಳು, ತಾಂತ್ರಿಕ ಸಮಸ್ಯೆಗಳು ಮತ್ತು ಫಲಾನುಭವಿಗಳ ಅಹವಾಲುಗಳನ್ನು ಒಂದೇ ಸೂರಿನಡಿ ಸ್ವೀಕರಿಸಿ ಪರಿಹರಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ಕಚೇರಿ ಆರಂಭಿಸಲಾಗಿತ್ತು. ಆದರೆ, ಪ್ರಸ್ತುತ ಕಚೇರಿಗೆ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಬಾರದಿರುವುದು ಹಾಗೂ ಸಿಬ್ಬಂದಿಯೇ ಇಲ್ಲದಿರುವ ಕಾರಣ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ದಾಖಲಿಸಲು ಸ್ಥಳವಿಲ್ಲದೆ ಕಾಂಗ್ರೆಸ ಭವನ, ಜಿಪಂ, ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ, ಸಂಬಂಧಿಸಿದ ಇಲಾಖೆಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.