ಪಾಲಿಕೆಯ ಚುನಾವಣಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಐಆರ ಕಾರ್ಯದ ಪ್ರಗತಿ, ದಾಖಲೆಗಳ ಪರಿಶೀಲನೆ ಹಾಗೂ ಗಣಕೀಕರಣ ಪ್ರಕ್ರಿಯೆ ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು. ಭಾಷಾ ಸಮಸ್ಯೆ ಸೇರಿ ಸಾಕಷ್ಟು ತೊಂದರೆ,ಕಚೇರಿಯ ದಿನನಿತ್ಯದ ಕೆಲಸದ ಜತೆಗೆ ಎಸ್‌ಐಆರ ಕಾರ್ಯವನ್ನು ಸಮಯೋಚಿತವಾಗಿ ಹಾಗೂ ನಿಖರವಾಗಿ ಪೂರ್ಣಗೊಳಿಸಲು ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ.