ಪುಲೆ ದಂಪತಿ ಯುವ ಜನಾಂಗಕ್ಕೆ ಮಾದರಿ

ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಹಾಗೂ ಸಾವಿತ್ರಿಬಾಯಿ ುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಮಲ್ಲಿಕಾರ್ಜುನ ಸ್ವಾಮೀಜಿ, ಲೀಲಾವತಿ ಹಿರೇಮಠ, ಆಂಜನೇಯ ಆರ್.ಕೆ., ರವಿ ಭಜಂತ್ರಿ, ಸುರೇಖಾ ಬಾಯನ್ನವರ ಇತರರಿದ್ದರು.
ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಹಾಗೂ ಸಾವಿತ್ರಿಬಾಯಿ ುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಮಲ್ಲಿಕಾರ್ಜುನ ಸ್ವಾಮೀಜಿ, ಲೀಲಾವತಿ ಹಿರೇಮಠ, ಆಂಜನೇಯ ಆರ್.ಕೆ., ರವಿ ಭಜಂತ್ರಿ, ಸುರೇಖಾ ಬಾಯನ್ನವರ ಇತರರಿದ್ದರು.
Published on
ಬೆಳಗಾವಿ: ಮಹಿಳೆ ಎಲ್ಲ ರಂಗದಲ್ಲೂ ಸಾಧಿಸುವ ಮೂಲಕ ತಾನು ಅಬಲೆಯಲ್ಲ ಸಬಲೆ ಎಂದು ಸಾಬೀತುಪಡಿಸಿದ್ದಾಳೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪಾಲಕರು ಆದ್ಯತೆ ನೀಡಬೇಕು. ಶಿಕ್ಷಣ ಕ್ರಾಂತಿ ಮಾಡಿದ ಸಾವಿತ್ರಿಬಾಯಿ ುಲೆ ದಂಪತಿ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ ಎಂದು ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ಮೈತ್ರಿಯಿಣಿ ಗದಿಗೆಪ್ಪಗೌಡರ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಾನುವಾರ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ಡರೇಷನ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾವಿತ್ರಿಬಾಯಿ ಪುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಹಿಳೆ ಮೊಬೈಲ್ ಗೀಳಿನಿಂದ ಹೊರಬಂದು, ಆರೋಗ್ಯ, ಶಿಕ್ಷಣದತ್ತ ಗಮನ ಹರಿಸಬೇಕು. ಸಂಘಟನೆ ಮೂಲಕ ಮಹಿಳಾ ಶಿಕ್ಷಕಿಯರ ಮನೋಬಲ ಹೆಚ್ಚಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಡಿಡಿಪಿಐ ಲೀಲಾವತಿ ಹಿರೇಮಠ, ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ೆಡರೇಷನ್ ಸಂಸ್ಥಾಪಕಿ ಡಾ.ಲತಾ ಮುಳ್ಳೂರ ಮಾತನಾಡಿದರು.
ಇದೇ ವೇಳೆ ಸಾವಿತ್ರಿಬಾಯಿ ಪುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಸ್ರೀನಬಾನು ಕಾಶೀಮನವರ ಅಧ್ಯಕ್ಷತೆ, ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಇಒ ಆಂಜನೇಯ ಆರ್.ಕೆ., ರವಿ ಭಜಂತ್ರಿ, ಐ.ಡಿ.ಹಿರೇಮಠ, ಡಾ.ದಾನಮ್ಮ ಝಳಕಿ, ಶಾಸಕ ಆಶ್ೀ ಸೇಠ್, ಮಲ್ಲಗೌಡ ಪಾಟೀಲ, ಸುರೇಖಾ ಬಾಯನ್ನವರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net