ಶಿರಸಂಗಿ ಲಿಂಗರಾಜರ ಸಮಾಜಮುಖಿ ಕಾರ್ಯ ಅಮರ

ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ತ್ಯಾಗವೀರ ಶಿರಸಂಗಿ ಲಿಂಗರಾಜ ಜಯಂತಿ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯ ಎಂ.ಟಿ.ಕುರಣಿ ಅವರನ್ನು ಸನ್ಮಾನಿಸಲಾಯಿತು. ಸುರೇಶ ಪಾಟೀಲ, ಅಣ್ಣಾಸಾಹೇಬ ಜಕಾತಿ ಇತರರಿದ್ದರು.

Published on
ಮಾಂಜರಿ: ಶಿರಸಂಗಿ ಲಿಂಗರಾಜರ ತ್ಯಾಗ ಮತ್ತು ಸಮಾಜಮುಖಿ ಚಿಂತನೆ ಎಲ್ಲರಿಗೂ ದಾರಿದೀಪ. ಅವರ ದಾನದ ಲವಾಗಿ ಇಂದು ಲಕ್ಷಾಂತರ ಕುಟುಂಬ ಶೈಕ್ಷಣಿಕ ಅಭಿವೃದ್ಧಿ ಹೊಂದಿವೆ ಎಂದು ಬಸಪ್ರಭು ಕೋರೆ ಪದವಿ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎಂ.ಟಿ.ಕುರಣಿ ಹೇಳಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಶಾರದಾದೇವಿ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಎಸ್.ಸಿ.ಪಾಟೀಲ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಬಸಪ್ರಭು ಕೋರೆ ಸಿಬಿಎಸ್‌ಸಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ಯಾಗವೀರ ಶಿರಸಂಗಿ ಲಿಂಗರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿರಸಂಗಿ ಲಿಂಗರಾಜರು ದೇವರ ಪ್ರತಿರೂಪ ಎಂದರು. ಸ್ಥಳೀಯ ಆಡಳಿತ ಮಂಡಳಿ ಸದಸ್ಯ ಸುರೇಶ ಪಾಟೀಲ ಮಾತನಾಡಿದರು. ಅಣ್ಣಾಸಾಹೇಬ ಜಕಾತಿ,
ಜೆ.ಎಸ್.ತಮಗೊಂಡ, ಪ್ರಮೋದ ಅಸೂದೆ, ಡಿ.ಎಸ್.ಬಾಕಳೆ, ಆರ್.ಉಮರಾಣೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net