ನಗರದ ಹಲವು ಕಲಾವಿದರು ಈಗಾಗಲೇ 20 ಅಡಿಗಿಂತಲೂ ಹೆಚ್ಚಿನ ಎತ್ತರದ ಗಣೇಶ ವಿಗ್ರಹಗಳನ್ನು ನಿರ್ಮಿಸಿದ್ದು, ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಹೀಗಾಗಿ 15ರಿಂದ 20 ಅಡಿಗಿಂತಲೂ ಹೆಚ್ಚಿನ ಎತ್ತರದ ವಿಗ್ರಹಗಳು ಈ ಬಾರಿ ಪ್ರತಿಷ್ಠಾಪನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆ ನಗರ ಪೊಲೀಸರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಪ್ರಮುಖರನ್ನು ಕರೆದು ಸಭೆ ನಡೆಸಿ ವಿಗ್ರಹ ಎತ್ತರ ಕಡಿಮೆ ಮಾಡುವಂತೆ ವಿನಂತಿಸಿದರು ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳು, ಪೊಲೀಸರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.